ಕಾಂಗ್ರೆಸ್ ಕುರಿತು ಎಸ್.ಡಿ.ಪಿ.ಐ. ರಾಜ್ಯಾಧ್ಯಕ್ಷರ ಹೇಳಿಕೆ ಹಾಸ್ಯಾಸ್ಪದ – ಮುಜಾಹಿದ್
ಹುಬ್ಬಳ್ಳಿ :ದೇಶದ ಭಾರತೀಯರ ಮನಸ್ಸಿನಲ್ಲಿ ತನ್ನದೇ ಆದಂತಹ ಜಾಗವನ್ನು ಗಿಟ್ಟಿಸಿಕೊಂಡಿರುವ ಕಾಂಗ್ರೆಸ್ ಪಕ್ಷದ ಬಗ್ಗೆ.ಡಿ.ಪಿ.ಐ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ಹೇಳಿಕೆ ಹಾಸ್ಯಾಸ್ಪದ ಹಾಗೂ ಬೇಜವಾಬ್ದಾರಿಯುತ ಎಂದು ಹುಬ್ಬಳ್ಳಿ ಕೇಂದ್ರ ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷ ಶಾಜಮಾನ್ ಮುಜಾಹಿದ್ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುರಿತು ಪತ್ರಿಕಾ ಹೇಳಿಕೆ ನೀಡಿದ್ದಾರೆ ಅವರು, ಹಿಂದೂ-ಮುಸ್ಲಿಮರು ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳಿದ್ದಂತೆ ಯಾವ ಕಣ್ಣಿಗೆ ಪೆಟ್ಟಾದರೂ ಕಾಂಗ್ರೆಸ್ ಪಕ್ಷಕ್ಕೆ ಆಗುವುದು ಹೀಗಾಗಿ ಈ ದೇಶದ ಎಲ್ಲ ವರ್ಗದ ಜನರು ಒಂದೇ ದೃಷ್ಟಿಯಿಂದ ನೋಡುವ ಯಾವುದೇ ರಾಷ್ಟ್ರೀಯ ಪಕ್ಷ ಇದ್ದರೇ ಅದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಸೂಚಿಸುತ್ತದೆ.
ಜನವರಿ 17 ರಂದು ನರಗುಂದ ಪಟ್ಟಣದಲ್ಲಿ ಸಮೀರ ಶಹಾಪುರ ಎಂಬ ಮುಸ್ಲಿಂ ಯುವಕನ ಕೊಲೆಯಾದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿಲ್ಲ ಎಂಬ ಅಬ್ದುಲ್ ಮಜೀದ್ ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಹಾಗೂ ಮಾಜಿ ಸಚಿವ ಯು.ಟಿ.ಖಾದರ್, ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾ ಅವರು ಕೊಲೆಯಾದ ಹುಡುಗನ ಮನೆಗೆ ಖುದ್ದು ಹೋದರು. ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರು ಐದು ಲಕ್ಷ ರೂಪಾಯಿಗಳ ಆರ್ಥಿಕ ನೆರವು ಈ ಕುಟುಂಬಕ್ಕೆ ಘೋಷಿಸಿದ್ದಾರೆ ಅದರಂತೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಹ ಈ ಘಟನೆಯನ್ನು ಖಂಡಿಸಿದರು. ಮಾತುಗಳನ್ನಾಡಿದ್ದಾರೆ.ಅಷ್ಟೇ ಅಲ್ಲ ಮೊನ್ನೆ ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕೊಲೆಯಾದ ಕೂಡಲೇ ಸಿದ್ಧರಾಮಯ್ಯನವರೇ ಈ ಕೃತ್ಯವನ್ನು ಖಂಡಿಸಿ ತಪ್ಪಿತಸ್ಥರು ಯಾರೇ ಆಗಿರಲಿ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಈ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಆಗ್ರಹ ಪಡಿಸಿದ್ದು ಇಲ್ಲಿ ಸ್ಮರಣೀಯವಾಗಿದೆ.
ಎಸ್.ಡಿ.ಪಿ.ಐ.ಅಧ್ಯಕ್ಷರು ವಿನಾಕಾರಣ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸಲು ಹೊರಟಿದ್ದು ಸರಿಯಲ್ಲ, ಯಾವ ಪಕ್ಷದ ಹಿತಾಸಕ್ತಿಗೆ ಶ್ರಮಿಸುತ್ತಿದ್ದಾರೆ ಮತ್ತು ಯಾರು ತಮ್ಮ ಬಿಟ್ಟಿ ಪ್ರಚಾರಕ್ಕಾಗಿ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂಬುದು ರಾಜ್ಯದ ಜನರ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಶಾಜಮಾನ್ ಮುಜಾಹಿದ್ ಅವರು ಎಸ್.ಡಿ.ಪಿ.ಐ. . ಪಕ್ಷದ ಮುಖಂಡರಿಗೆ ತಿರುಗೇಟು ನೀಡಿ ಇನ್ಮುಂದಾದರೂ ಎಸ್.ಡಿ.ಪಿ.ಐ. ಪಕ್ಷದವರು ಸರಿಯಾದ ಮಾಹಿತಿಗಳನ್ನು ಇಟ್ಟುಕೊಂಡು ಪತ್ರಿಕಾಗೋಷ್ಠಿ ನಡೆಸುವುದನ್ನು ಬಿಟ್ಟು ಜನರಿಗೆ ತಪ್ಪು ಸಂದೇಶ ರವಾನಿಸುವುದು ಬೇಡ ಎಂದು ಶಾಜಮಾನ್ ಮುಜಾಹಿದ್ ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡಿದ್ದಾರೆ.