ಜಗದೀಶ್ ಶೆಟ್ಟರ್ ಹೇಳಿಕೆ
ಹುಬ್ಬಳ್ಳಿ: ಹರ್ಷ ಹಿಂದೂ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರು ಅವರ ಕುಟುಂಬಕ್ಕೆ ಸಾಂತ್ವನ ಹೇಳಿಲ್ಲ. ಅವರಿಗೆ ವೋಟ್ ಬ್ಯಾಂಕ್ ರಾಜಕಾರಣವೇ ಹೆಚ್ಚು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನ ಹರ್ಷ ಕೊಲೆಗೆ ನಾಡಿನ ಎಲ್ಲ ಪ್ರಮುಖರು, ಸ್ವಾಮೀಜಿಗಳು ಸೇರಿದಂತೆ ಗಣ್ಯಾತೀಗಣ್ಯರು ಭೇಟಿ ನೀಡಿ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಅವರ ಮನೆಗೆ ಹೋದರೆ ಎಲ್ಲಿ ಮುಸ್ಲಿಂ ವೋಟ್ ಗಳು ಕಡಿಮೆಯಾಗಲಿದೆ ಎಂಬ ಕಾರಣಕ್ಕೆ ಹೋಗಿಲ್ಲ. ಈ ರೀತಿಯ ರಾಜಕಾರಣದಿಂದ ಕಾಂಗ್ರೆಸ್ ಪಕ್ಷ ಹಾಳಾಗಲಿದೆ ಎಂದು ಕುಟುಕಿದರು.
ಇನ್ನು ನಾಳೆ ಮತ್ತು ನಾಡಿದ್ದು ಬಿಜೆಪಿ ಕಾಂಗ್ರೆಸ್ ಜನವಿರೋಧಿ ಧೋರಣೆಗಳನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಜನರನ್ನು ಒಗ್ಗೂಡಿಸುವುದು, ಜಾಗೃತಿ ಮೂಡಿಸುವುದು ಪ್ರತಿಭಟನೆಯ ಉದ್ದೇಶವಾಗಿದೆ. ನಾಳೆ ನಾನು ಬೆಂಗಳೂರಿಗೆ ಹೋಗುವ ಕಾರಣ ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.