ಕುಂದಗೋಳ : ಕ್ಷುಲ್ಲಕ ಕಾರಣಕ್ಕಾಗಿ ಒಂಟಿ ಮಹಿಳೆಯ ಮೇಲೆ ಸ್ಥಳೀಯ ಕುಟುಂಬಸ್ಥರು ಹಲ್ಲೆ ನಡೆಸಿದ ಘಟನೆ ಕುಂದಗೋಳ ತಾಲೂಕಿನ ಸಂಕ್ಲಿಪುರ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆ ಆಸ್ಪತ್ರೆ ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಂಕ್ಲಿಪುರ ಗ್ರಾಮದ ಲಲಿತಾ ತಿಪ್ಪಣ್ಣ ಕರೆಮ್ಮನವರ ಎಂಬ ಮಹಿಳೆಯ ಮೇಲೆ ಅದೇ ಗ್ರಾಮದ ನೆರೆ ಹೊರೆಯವರು ಸ್ನಾನ ಗೃಹದ ನೀರನ್ನು ಹರಿ ಬಿಡುವ ವಿಚಾರವಾಗಿ ಮಾತಿಗೆ ಮಾತು ಎದುರಾಗಿ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಮಹಿಳೆ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಕುರಿತು ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಬಳಿಕವಷ್ಟೇ ಮಾಹಿತಿ ದೊರೆಯಲಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1