Top NewsUncategorizedಅಪರಾಧಜಿಲ್ಲೆರಾಜ್ಯ
Trending

ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 1.50.000 ಸಾವಿರ ರೂ. ದಂಡ !

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಅಪರಾಧಿಗಳಿಗೆ ಹುಬ್ಬಳ್ಳಿಯ 5 ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 1.50.000 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಹುಬ್ಬಳ್ಳಿಯ ಕಸಬಾಪೇಟ ಪೋಲಿಸ್ ಠಾಣೆಯ ವ್ಯಾಪ್ತಿಯ ಪಠಾಣಗಲ್ಲಿಯ ಸರ್ಕಲ್ ಬಳಿ ಶಾಬುದ್ದಿನ ಎಂಬಾತನನ್ನು ಶಮಶುದ್ದಿನ ಸವಣೂರು, ಜುಬೇರ್ ಅಹ್ಮದ್ ಕಲಬುರ್ಗಿ ಎಂಬುವವರು ಚಾಕುವಿನಿಂದ ಹೊಟ್ಟೆ, ಬೆನ್ನಿಗೆ ಹಾಗೂ ಪಕ್ಕಡಿ ಭಾಗಕ್ಕೆ ಇರಿದು ಕೊಲೆ ಮಾಡಿದ್ದರು.

ಏನಿದು ಹಿನ್ನೆಲೆ: 2020 ಮಾರ್ಚ್ 10 ರಂದು ರಾತ್ರಿ 11:45 ರ ಸುಮಾರಿಗೆ ಕಟಗರ ಓಣಿಯ ಸರಕಾರಿ ಉರ್ದು ಶಾಲೆಯ ಹತ್ತಿರ ಆರೋಪಿಗಳಾದ ಶಮಶುದ್ದಿನ ಸವಣೂರು, ಜುಬೇರ್ ಅಹ್ಮದ್ ಕಲಬುರ್ಗಿ ಮಾತನಾಡುತ್ತಾ ಕುಳಿತ್ತಿದ್ದ ಸಂದರ್ಭದಲ್ಲಿ ಶಾಬುದ್ದಿನ ಬಂದು ಗುರಾಯಿಸಿ ನೋಡಿದಕ್ಕೆ ಶಮಸುದ್ದಿನ ಸವಣೂರು ಯಾಕೆ ಗುರಾಯಿಸಿವೆ ಎಂದು ಪ್ರಶ್ನೆ ಮಾಡಿದ್ದಾನೆ. ಇದೇ ಕಾರಣಕ್ಕೆ ಶಾಬುದ್ದಿನ ತನ್ನ ಕೈಯಲ್ಲಿದ್ದ ಕಡಗದಿಂದ ಹೊಡೆಯಲು ಹೋದಾಗ ಸ್ಥಳೀಯರು ಜಗಳ ಬಿಡಿಸಿ ಕಳಿಸಿದ್ದಾರೆ. ಇದೇ ಕಾರಣಕ್ಕೆ ಆರೋಪಿಗಳು ದ್ವೇಷದಿಂದ ಮಾ.11 2020 ರಂದು ಪಠಾಣಗಲ್ಲಿಯ ಸರ್ಕಲ್ ನಲ್ಲಿ ಶಾಬುದ್ದಿನ ಬರುವುದನ್ನು ಕಾದು ಆತನ ಜೊತೆಗೆ ತಂಟೆ ತೆಗೆದು ಆತನಿಗೆ ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಗಾಯಗೊಳಿಸಿ ಬರ್ಬರವಾಗಿ ಕೊಲೆ ಮಾಡಿದರು.

ಈ ಕುರಿತು ಮೃತನ ತಂದೆ ನೀಡಿದ ದೂರಿನ ಅನ್ವಯ ತನಿಖಾಧಿಕಾರಿ ಶ್ಯಾಮರಾವ್ ಸಜ್ಜನ್ ತನಿಖೆ ನಡೆಸಿ, ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಈ ಕುರಿತು ಐದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ ಕೆ.ಎನ್ ರವರು 2022ರ ಮಾ.28 ರಂದು ಜೀವಾವಧಿ ಶಿಕ್ಷೆ ಮತ್ತು 1.50,000 ರೂ ದಂಡ, ದಂಡವನ್ನು ಕಟ್ಟದಿದ್ದರೆ ಹೆಚ್ಚುವರಿಯಾಗಿ 2 ವರ್ಷ ಕಾರವಾಸ ಶಿಕ್ಷೆ ಹಾಗೂ ದಂಡದ ಮೊತ್ತದಲ್ಲಿ 1.45.000 ರೂ. ಗಳನ್ನು ಅವಲಂಬಿತರಿಗೆ ಪರಿಹಾರವಾಗಿ ನೀಡಲು ಆದೇಶ ನೀಡಿರುತ್ತಾರೆ. ಸರ್ಕಾರಿ ವಕೀಲ ಸುಮಿತ್ರಾ ಅಂಚಟಗೇರಿ ವಾದ ಮಂಡಿಸಿದ್ದರು.

👉ಮುಂಬರುವ ಸುದ್ದಿ: ಪತಿಯ ಸಂದೇಹಕ್ಕೆ ಬಲಿಯಾದ ಪತ್ನಿ ನಾಳೆ ಬೆಳಿಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ…

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button