ಹುಬ್ಬಳ್ಳಿ: ಕೆಪಿಸಿಸಿ ಕಾರ್ಯದರ್ಶಿ ನಾಗರಾಜ ಗೌರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಮಂಗಳವಾರ ದೈನಂದಿನ ಕಾರ್ಯದಲ್ಲಿ ತೊಡಗಿಕೊಂಡಿದ್ದ ಸಮಯದಲ್ಲಿ ಸಂಜೆ 4.30 ರ ವೇಳೆಗೆ ಏಕಾಏಕಿ ಹೃದಯದಲ್ಲಿ ನೋವು ಕಾಣಿಸಿಕೊಂಡಿದ್ದು, ಇದನ್ನು ನೋಡಿದ ಸ್ಥಳೀಯರು ಕೂಡಲೇ ನಾಗರಾಜ ಗೌರಿ ಅವರನ್ನು ಸುಚಿರಾಯು ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.
ಸದ್ಯ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದ ನಾಗರಾಜ ಗೌರಿ ಅವರಿಗೆ ವೈದ್ಯರು ಸ್ಟಂಟ್ ಹಾಕಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1