ಹುಬ್ಬಳ್ಳಿ: ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೋಲಿಸರು ದಾಳಿ ಮಾಡಿ ನಾಲ್ಕು ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನನವರ ಅವರ ಮಾರ್ಗದರ್ಶನದಲ್ಲಿ ನಡೆದ ದಾಳಿ ಇದಾಗಿದ್ದು, ದಾಳಿ ಕಾಲಕ್ಕೆ 13 ಸಾವಿರ ನಗದು ಹಾಗೂ ಜೂಜಟಾಕ್ಕೆ ಬಳಕೆ ಮಾಡುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1