ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ನರೇಂದ್ರ ಮೋದಿ ಅವರ ಭಾವಚಿತ್ರ ಇದ್ದರೇ ಮಾತ್ರ ಗೆಲ್ಲತ್ತಾರೆ. ವೈಯಕ್ತಿಕ ವರ್ಚಸ್ಸಿನಿಂದಲ್ಲ, ಧಾರವಾಡ ಜಿಲ್ಲೆಯಲ್ಲಿ ಪ್ರಲ್ಹಾದ್ ಜೋಶಿ ಅವರು ತಮ್ಮ ಭಾವಚಿತ್ರಯಿಟ್ಟುಕೊಂಡು ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಜಯಗಳಿಸಲಿ ಎಂದು ಸಾಮಾಜಿಕ ಹೋರಾಟಗಾರ ರಾಜು ನಾಯಕವಾಡಿ ಸವಾಲ್ ಹಾಕಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರು ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಜನರು ಬದಲಾವಣೆ ಬಯಸತ್ತಾ ಇದ್ದಾರೆ. ಕಳೆದ ನಾಲ್ಕು ಬಾರಿ ಸಂಸದರಾದರೂ ಜಿಲ್ಲೆ ಅಭಿವೃದ್ಧಿಯಿಂದ ಕುಂಠಿತವಾಗಿದೆ. ಇದು ಜನರಿಗೆ ಗೊತ್ತಿದೆ. ಹೀಗಾಗಿ ಜನರು ಬದಲಾವಣೆ ಬಯಸತ್ತಾ ಇದ್ದಾರೆ ಎಂದರು.
ಕೇಂದ್ರ ಸರ್ಕಾರದಿಂದ ಸಾವಿರಾರು ಕೋಟಿ ಹಣ ಬಂದಿದೆ. ಆದರೆ ಅದರ ಹಣದ ದುರುಪಯೋಗ ಆಗುತ್ತಿದೆ. ಯಾವುದೇ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ, ಹುಬ್ಬಳ್ಳಿ -ಧಾರವಾಡದಲ್ಲಿ ಸಮಸ್ಯೆಗಳು ಸಮಸ್ಯೆಯಾಗಿ ಉಳಿದಿವೆ. ಜನಪ್ರತಿನಿಧಿಗಳು ಮಾತ್ರ ಅಭಿವೃದ್ಧಿ ಆಗಿದ್ದಾರೆ. ಇದ ಖಂಡನೀಯ ಎಂದು ಹರಿಹಾಯ್ದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗುವುದು ಶೆಟ್ಟರ್ ಕೆಲಸ, ಈಗಾಗಲೇ ಅವರು ಅಧಿಕಾರ ಅನುಭವಿಸಿದ್ದಾರೆ. ಬಿಜೆಪಿಯವರಯ ಟಿಕೆಟ್ ಕೊಡಲಿಲ್ಲ ಅಂದಾಗ ಸ್ವತಂತ್ರ ಅಭ್ಯರ್ಥಿಯಾಗಿ ಗೆಲ್ಲಬೇಕಿತ್ತು. ಅದನ್ನು ಬಿಟ್ಟು ಕಾಂಗ್ರೆಸ್ ಅಧಿಕಾರ ಕೊಟ್ಟರು ಇದೀಗ ದ್ರೋಹ ಮಾಡಿ ಬಿಜೆಪಿಗೆ ಸೇರಿದ್ದಾರೆಂದು ಕಿಡಿಕಾರಿದರು.
ಬಿಜೆಪಿ ಕೇವಲ ನರೇಂದ್ರ ಮೋದಿ ಅವರ ಭಾವಚಿತ್ರ ಇದ್ರೆ ಮಾತ್ರ ಗೆಲ್ಲತ್ತಾರೆ. ಯಾರೊಬ್ಬರಿಗೆ ವೈಯಕ್ತಿಕ ವರ್ಚಸ್ಸು ಇಲ್ಲ ಎಂದು ಲೇವಡಿ ಮಾಡಿದರು.