ಹುಬ್ಬಳ್ಳಿ: ತಾಲ್ಲೂಕಿನ ಕುಸುಗಲ್ ಗ್ರಾಮದ ಸರಕಾರಿ ಶಾಲೆಯಲ್ಲಿ 23-2-2024 ರಂದು ನಡೆಯಲಿರುವ ವಾರ್ಷಿಕೋತ್ಸವ ಸಂಭ್ರಮದಲ್ಲಿ ಇಸ್ರೋ ವಿಜ್ಞಾನಿ ಡಾ.ದಾರುಕೇಶ ಬಿ.ಎಚ್.ಎಮ್ ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾಗಿ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಲಿದ್ದಾರೆ.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸರಕಾರಿ ಪ್ರೌಢಶಾಲೆಯ ಸರ್ ಸಿ. ವಿ. ರಾಮನ್ ವಿಜ್ಞಾನ ಜಗತ್ತು, ಶಾಲಾ ವಿಷಯಗಳನ್ನು ಕುರಿತು ಸಂವಹನ ಮಾಡಲಿದ್ದಾರೆ. ಅಲ್ಲದೇ ಸದರಿ ಕಾರ್ಯಕ್ರಮಕ್ಕೆ ನವಲಗುಂದ ಜನಪ್ರಿಯ ಶಾಸಕ ಎನ್.ಎಚ್.ಕೋನರಡ್ಡಿ ಸೇರಿದಂತೆ. ಗ್ರಾಮದ ಸದಸ್ಯರು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಆದ್ದರಿಂದ ಈ ವಾರ್ಷಿಕೋತ್ಸವ ಸಂಭ್ರಮದಲ್ಲಿ ಎಲ್ಲರೂ ಭಾಗಿಯಾಗಿ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1