ಹುಬ್ಬಳ್ಳಿ: ಅಕ್ರಮ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಗಳನ್ನು ಬಂಧಿಸುವಲ್ಲಿ ಉಪನಗರ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ.
ತೊರವಿಹಕ್ಕಲದ ಫಯಾಜ್ ಉಂಟವಾಲೆ (21), ಗೌಳಿಗಲ್ಲಿಯ ಕಿರಣ ಗಟ್ಟಿ (20) ಎಂಬಾತರೇ ಬಂಧಿತರಾಗಿದ್ದು, ಇವರು ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಸಿಗುತ್ತಿದ್ದ ಹಾಗೇ ಪಿಐ ಸಾಲಿಮಠ ಅವರ ನೇತೃತ್ವದ ತಂಡ ದಾಳಿ ಮಾಡಿ ಅಂದಾಜು 392 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಇದರ ಜತೆಗೆ ಕೃತ್ಯಕ್ಕೆ ಬಳಕೆ ಮಾಡಿದ ವಸ್ತುಗಳು ಹಾಗೂ ಒಂದು ಬುಲೆಟ್ ಬೈಕ್ ಸಹ ವಶಕ್ಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1