ಪೇಶಾವರ: ಪಾಕಿಸ್ತಾನದಲ್ಲಿ ಕಳೆದ 48 ಗಂಟೆಗಳಲ್ಲಿನ ಭಾರಿ ಮಳೆಯ ಅವಾಂತರಗಳಿಂದಾಗಿ 37ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ.
ಖೈಬರ್ ಪಂಯ್ತುಂಗ್ವಾ ಪ್ರಾಂತ್ಯದಲ್ಲಿ ಭೂಕುಸಿತ ಸಂಭವಿಸಿ, ರಸ್ತೆಗಳು ಮುಚ್ಚಲ್ಪಟ್ಟಿದ್ದಲ್ಲದೆ. ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲದೆ, ಅಂಗಡಿ-ಮುಂಗಟ್ಟುಗಳ ಜತೆಗೆ ಮನೆಗಳೂ ನೆಲಸಮವಾಗಿವೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1