ಬೆಂಗಳೂರು : ಬಿಜೆಪಿಯ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾನ್ನಾಗಿ ಪ್ರೀತಿ ಹೊನ್ನಗುಡಿ ಅವರಿಗೆ ನೇಮಕ ಮಾಡಲಾಗಿದೆ ಎಂದು ಬಿಜೆಪಿಯ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ರಾಜೇಶ್ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಪಕ್ಷದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸಂಯೋಜಕರಾದ ಶ್ರೀಯುತ ಎಸ್ ದತ್ತಾತ್ರಿ ಅವರು ಆದೇಶ ಪತ್ರ ನೀಡಿ ಮಾತನಾಡಿ
ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಆಶಿಸುತ್ತೇನೆ ಎಂದು ಪ್ರೀತಿ ಅವರಿಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರೀತಿ ಹೊನ್ನಗುಡಿ ಅವರು ಮೂಲತ ಗದಗದವರಾಗಿದ್ದು ಹುಬ್ಬಳ್ಳಿಯ ಪ್ರತಿಷ್ಢಿತ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ ಅನುಭವ ಅವರಿಗೆ ಇದ್ದು, ಜೊತೆಗೆ ಪದವಿದರಾಗಿದ್ದು, ಸದ್ಯ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಮೋದಿ ಅವರ ಜನಪರ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಪಕ್ಷ ಸಂಘಟನೆ ಕಾರ್ಯಮಾಡುತ್ತಿದ್ದಾರೆ ಲೊಕಸಭಾ ಚುನಾವಣೆಯಲ್ಲಿ ರಾಜ್ಯದ್ಯಂತ ಪ್ರವಾಸಮಾಡಿ ಬಿಜೆಪಿ ಅಭ್ಯರ್ಥಿಗಳಗೆಲುವಿಗೆ ಶ್ರಮಿಸಲು ಪಣತೊಟ್ಟಿದ್ದಾರೆ.