ದಿನವಾಣಿ ವಾರ್ತೆ
ಬೆಂಗಳೂರು: ಮಾಜಿ ಸಚಿವ ಹಾಗೂ ಹಾಲಿ ಶಾಸಕರಾಗಿರುವ ವಿನಯ ಕುಲಕರ್ಣಿ ಧಾರವಾಡದ ಹೆಬ್ಬಳ್ಳಿಯ ಜಿಪಂ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ತಮ್ಮ ವಿರುದ್ಧ ನಿಗದಿಪಡಿಸಿರುವ ಆರೋಪ ರದ್ದು ಪಡಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಮ್ಮ ವಿರುದ್ಧ ಆರೋಪ ನಿಗದಿಪಡಿಸಿರುವುದರಲ್ಲಿ ಸಾಕಷ್ಟು ದೋಷಗಳಿವೆ. ಆದ್ದರಿಂದ ದೋಷಾರೋಪಣೆ ಹಾಗೂ ಪ್ರಕರಣದ ಸಂಬಂಧ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ವಿಶೇಷ (ಜನಪ್ರತಿನಿಧಿಗಳ) ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ತೀರ್ಪು ಪ್ರಕಟಿಸಿತು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1