ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಐಟಿ ಇಲಾಖೆಯ ಅಧಿಕಾರಿಗಳ ದಾಳಿ ನಿರಂತರವಾಗಿದ್ದು, ಇದೀಗ ಧಾರವಾಡದಲ್ಲಿ ಮನೆಯೊಂದರಲ್ಲಿ ಕೋಟ್ಯಾಂತರ ರೂಪಾಯಿ ದೊರೆತಿದೆ.
ಹೌದು, ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಎಸಿಪಿ ಬಸವರಾಜ ಅವರ ನೇತೃತ್ವದಲ್ಲಿ ಬಸವರಾಜ ದತ್ತುಣ್ಣವರ ಎಂಬುವವರ ಮನೆಯ ಮೇಲೆಯೇ ದಾಳಿ ನಡೆದಿದ್ದು, ದಾಳಿ ಕಾಲಕ್ಕೆ ಬರೋಬರಿ 18 ಕೋಟಿ ರೂಪಾಯಿ ಸಿಕ್ಕಿದೆ.
ಇನ್ನು ಮನೆಯಲ್ಲಿ ಮದ್ಯ ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿ ಆಧರಿಸಿ ಈ ಒಂದು ದಾಳಿ ನಡೆಸಲಾಗಿದ್ದು, ಮನೆ ಶೋಧ ಕಾರ್ಯ ಮಾಡಿದಾಗ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಹಣದ ಕಂತೆ ಕಂತೆ ನೋಟುಗಳನ್ನು ನೋಡಿ ಅಚ್ಚರಿಗೊಂಡಿದ್ದಾರೆ.
ಸದ್ಯ ಸ್ಥಳದಲ್ಲಿ 20 ಕ್ಕೂ ಹೆಚ್ಚು ಅಧಿಕಾರಿಗಳು ಬೀಡುಬಿಟ್ಟಿದ್ದು ಪರಿಶೀಲನೆ ಕಾರ್ಯ ಮುಂದುವರೆಸಿದ್ದಾರೆ, ಹಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1