ಅಪರಾಧಜಿಲ್ಲೆದೇಶರಾಜಕೀಯರಾಜ್ಯ

ನನ್ನ ಜೀವಕ್ಕೆ ಅಪಾಯವಿದೆ : ಮೃತ ನೇಹಾ ತಂದೆ ನಿರಂಜನಯ್ಯ ಹಿರೇಮಠ

ಹುಬ್ಬಳ್ಳಿ: ನನ್ನ ಜೀವಕ್ಕೂ ಅಪಾಯದ ಸೂಚನೆ ಸಿಗುತ್ತಿದ್ದು, ಈ ಹಿನ್ನೆಲೆಯಲ್ಲಿ ನನ್ನ ಕುಟುಂಬಕ್ಕೆ ಸರ್ಕಾರ ಭದ್ರತೆ ಒದಗಿಸಬೇಕೆಂದು ನೇಹಾ ಹಿರೇಮಠ ಅವರ ತಂದೆ ನಿರಂಜನಯ್ಯ ಹಿರೇಮಠ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ರಾಷ್ಟ್ರಮಟ್ಟದಲ್ಲಿ ಸುದ್ದಿ ಆಗಿದೆ. ನನಗೆ ಎಲ್ಲರೂ ಸಾಂತ್ವನ ಹೇಳಲು ಬರುತ್ತಿದ್ದಾರೆ. ಈ ವೇಳೆ ನನಗೆ ಸಂಶಯ ವ್ಯಕ್ತಿಗಳು ಕಂಡು ಬರುತ್ತಿದ್ದಾರೆ. ಅವರು ನನಗೆ ಸಾಂತ್ವನ ಹೇಳುವ ನೆಪದಲ್ಲಿ ಮನೆಯ ಸುತ್ತಮುತ್ತ ತಿರುಗಾಡುತ್ತಿದ್ದಾರೆ. ಇದರಿಂದ ನನ್ನ ಜೀವಕ್ಕೆ ಅಪಾಯದ ಸೂಚನೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಭದ್ರತೆ ಒದಗಿಸುವ ಕೆಲಸ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇನ್ನೂ ಕೆಲವೇ ನಿಮಿಷಗಳಲ್ಲಿ ನೇಹಾ ಮನೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದು, ನೇಹಾ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button