ಬೆಂಗಳೂರು: ಉಪ್ಪು ತಿಂದವರು ನೀರು ಕುಡಿಯಲೇಬೇಕು. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕೆಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಕುರಿತು ಸುದ್ದಿಗಾರರಿಗೆ ಮಾತನಾಡಿದ ಅವರು, ಆರೋಪದ ಕುರಿತು ತನಿಖೆಗೆ ಸಿಎಂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದು ಗಮನಕ್ಕೆ ಬಂದಿದೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳಲಿ. ಸತ್ಯಾಂಶ ಏನು ಎಂಬುದು ಹೊರಬರಲಿ ಎಂದರು.
ನಾನಾಗಲೀ, ಎಚ್.ಡಿ. ದೇವೇಗೌಡರಾಗಲೀ ಸಂಕಷ್ಟ ಹೇಳಿಕೊಂಡು ಬಂದ ಮಹಿಳೆಯರನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದ್ದೇವೆ. ಮಹಿಳೆಯರ ಬಗ್ಗೆ ಸದಾ ಗೌರವದ ಭಾವನೆ ಹೊಂದಿದ್ದೇವೆ. ಈ ನೆಲದ ಕಾನೂನಿನಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ತಪ್ಪು ಮಾಡಿದವರನ್ನು ನಾವು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1