ಹುಬ್ಬಳ್ಳಿ: ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಧಾರವಾಡ ಜಿಲ್ಲೆಯಲ್ಲಿ ಅಧಿಕಾರಿಗಳು ಪ್ರಲ್ಹಾದ್ ಜೋಶಿ ಅವರ ಮನೆಯ ಆಳಿನಂತೆ ಕೆಲಸ ಮಾಡುತ್ತಿದ್ದಾರೆಂಬ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಸುನಕ್ಕಿದ್ದಾರೆ.
ಅಷ್ಟೇ ಅಲ್ಲದೇ ನಮ್ಮ ಬಿಜೆಪಿ ಸರ್ಕಾರ ಇದ್ದಾಗಲೇ ಅಧಿಕಾರಿಗಳ ವರ್ಗಾವಣೆಯಲ್ಲಿ ಕೈಹಾಕದೇ ಇದ್ದರು, ಕಾಂಗ್ರೆಸ್’ನವರು ಅಧಿಕಾರಕ್ಕೆ ಬಂದ ಕೂಡಲೇ ಹಿಂದಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಹೀಗಿದ್ದಾಗ್ಯೂ ಹುಬ್ಬಳ್ಳಿ – ಧಾರವಾಡದಲ್ಲಿ ಏನೇ ಆದರೂ ಅದಕ್ಕೆ ಜೋಶಿ ಕಾರಣ ಎನ್ನುತ್ತಾರೆ ಎಂದು ನಸುನಕ್ಕರು.
ಇದೇ ವೇಳೆ ದಿಂಗಾಲೇಶ್ವರ ಶ್ರೀಗಳ ಮೇಲೆ ದಾಖಲಾದ ಎಫ್ಐಆರ್ ಬಗ್ಗೆ ಪ್ರತಿಕ್ರಿಯೆ ನೀಡದೇ ಮುಂದೆ ಸಾಗಿದರು.
ಇದೇ ವೇಳೆ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರಲ್ಹಾದ್ ಜೋಶಿ, ಪ್ರಜ್ವಲ್ ವಿಡಿಯೋ ನಮ್ಮದಲ್ಲ ಎಂದು ಹೇಳಲಿ, ಮುಂದೆ ನಾವು ನೋಡಿಕೊಳ್ಳುತ್ತೇವೆ. ಎಫ್ಎಸ್ಎಲ್ ಸೇರಿದಂತೆ ಇತ್ಯಾದಿ ತನಿಖೆಗೆ ಒತ್ತಾಯಿಸುತ್ತೇವೆ ಎಂದರು.
ವಿಡಿಯೋ…
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1