ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊರ್ವನನ್ನು ಕಲ್ಲಿನೊಂದ ಜಜ್ಜಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಜರುಗಿದೆ.
ಶರೀಫ್’ಸಾಬ (42) ಎಂಬಾತನೇ ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮೂಲತಃ ಮುಂಡಗೊಡ ತಾಲೂಕಿನವನಾಗಿದ್ದು, ಸದ್ಯ ಹಳ್ಯಾಳ ಗ್ರಾಮದಲ್ಲಿ ಟ್ರಾಕ್ಟರ್ ಹಾಗೂ ಕೂಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.
ರವಿವಾರ ರಾತ್ರಿ ಹಳ್ಯಾಳ ಗ್ರಾಮದ ಶಾಲೆಯ ಆವರಣದಲ್ಲಿನ ನಿರ್ಮಾಣ ಹಂತದ ಕೊಠಡಿಯೊಂದರಲ್ಲಿ ಈತನನ್ನು ಕಲ್ಲಿನಿಂದ ಹೊಡೆದು ಕೊಲೆಗೈಯಲಾಗಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿಗೆ ಗ್ರಾಮೀಣ ಪೋಲಿಸ್ ಠಾಣೆಯ ಪೋಲಿಸರು ಆಗಮಿಸಿದ್ದು, ಪರಿಶೀಲನೆ ನಡೆಸಿ, ಮೃತನ ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ.
ಸದ್ಯ ಶರೀಫ್’ನನ್ನು ಯಾವ ಕಾರಣಕ್ಕೆ ಕೊಲೆಗೈಯಲಾಗಿದೆ. ಯಾರು ಮಾಡಿದ್ದಾರೆಂಬ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಪೋಲಿಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1