ಅಪರಾಧಜಿಲ್ಲೆ

ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೋಲಿಸರು

ಹುಬ್ಬಳ್ಳಿ: ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೋಲಿಸರು ಕಾರ್ಯಾಚರಣೆ ನಡೆಸಿ ಕೇವಲ 24 ಗಂಟೆ ಒಳಗಾಗಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರವಿವಾರ ರಾತ್ರಿ 9.30 ರ ಸುಮಾರಿಗೆ ಮುಂಡಗೋಡದ ಮೂಲದ ಹಳ್ಯಾಳ ಗ್ರಾಮದ ನಿವಾಸಿಯಾಗಿದ್ದ ಶರೀಫ್’ಸಾಬ ಮೆಹಬೂಬ್’ಸಾಬ ಕಮಡೊಳ್ಳಿ (42) ಎಂಬಾತನನ್ನು ಗ್ರಾಮದ ಸರ್ಕಾರಿ ಶಾಲೆಯ ನಿರ್ಮಾಣ ಹಂತದ ಕೊಠಡಿಯಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಬಳಿಕ ಈ ವಿಷಯವನ್ನು ಗ್ರಾಮಸ್ಥರು ಪೋಲಿಸರಿಗೆ ತಿಳಿಸಿದರು.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಇನ್ಸ್ಪೆಕ್ಟರ್ ಮುರಗೇಶ ಚನ್ನನವರ ಹಾಗೂ ಮತ್ತವರ ತಂಡ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

ಬಳಿಕ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮುರುಗೇಶ ಚನ್ನಣ್ವವರ,  ಪಿಎಸ್ಐ ಸಚಿನ್ ಆಲಮೇಲ್ಕರ್, ಅಭಿಜಿತ್ ಹಾಗೂ ಇತರ ಸಿಬ್ಬಂದಿಗಳ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೊಲೆ ಗೈದಿದ್ದ ಆರೋಪಿಗಳಾದ ಹುಬ್ಬಳ್ಳಿಯ ಯಲ್ಲಾಪುರ ಓಣಿಯ ನಿವಾಸಿ ಶಶಿಧರ ಚನ್ನೋಜಿ ಅಲಿಯಾಸ್ ಶೇಶ್ಯಾ (22) ಹಾಗೂ ಹಳ್ಯಾಳ ಗ್ರಾಮದ ನಾಗರಾಜ ಸೋಮರಡ್ಡಿ ಎಂಬಾತನನ್ನು ಬಂಧಿಸಿದ್ದು, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೋಲಿಸರ ಮುಂದೆ ತಪ್ಪೋಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕೊಲೆಯ ಆರೋಪಿಯಾಗಿರುವ ಶಶಿಧರನ ಮೇಲೆ ಕೊಲೆ ಯತ್ನ ಹಾಗೂ ಕಳ್ಳತನದ ಪ್ರಕರಣಗಳಿವೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button