ಹುಬ್ಬಳ್ಳಿ: ನಟ ಸಲ್ಮಾನ್ ಖಾನ್ ಅವರಿಗೆ ಸಾಲು ಸಾಲು ಬೆದರಿಕೆಗಳು ಬರುತ್ತಿವೆ. ಅವರನ್ನು ಕೊಲೆ ಮಾಡೋದಾಗಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನವರು ಬೆದರಿಕೆ ಹಾಕುತ್ತಿದ್ದಾರೆ. ಇತ್ತೀಚೆಗಷ್ಟೇ ಸಲ್ಮಾನ್ ಖಾನ್ಗೆ ಹೊಸ ಬೆದರಿಕೆ ಬಂದಿತ್ತು. ಈ ಪ್ರಕರಣದ ಆರೋಪಿ ಹುಬ್ಬಳ್ಳಿಯಲ್ಲಿ ಇದ್ದಾನೆ ಎಂಬ ಮಾಹಿತಿ ಮುಂಬೈ ಪೊಲೀಸರ ತಂಡ ಹುಬ್ಬಳಿಗೆ ಆಗಮಿಸಿ ಶೋಧ ನಡೆಸಿದ್ದಾರೆ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ವ್ಯಕ್ತಿಯೋರ್ವ ಸಲ್ಮಾನ್ಗೆ ಬೆದರಿಕೆ ಹಾಕಿದ್ದ. ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂನ ಸಹಾಯವಾಣಿ ವಾಟ್ಸ್ಆಪ್ ಸಂಖ್ಯೆಗೆ ಸಂದೇಶ ಕಳುಹಿಸಲಾಗಿತ್ತು. ಕೃಷ್ಣಮೃಗ ಬೇಟೆ ಕೇಸ್ನಲ್ಲಿ ಸಲ್ಮಾನ್ ಖಾನ್ ಅವರು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂಪಾಯಿ ನೀಡಬೇಕು ಎಂದು ಹೇಳಿದ್ದ. ಈತ ಕರ್ನಾಟಕದಿಂದ ಈ ಬೆದರಿಕೆ ಹಾಕಿದ್ದ ಅನ್ನೋದು ಗೊತ್ತಾಗಿದೆ.
ಸದ್ಯ ಮುಂಬೈ ಪೊಲೀಸರು ಹುಬ್ಬಳ್ಳಿಗೆ ಬಂದಿದ್ದಾರೆ ಎಂಬ ಮಾಹಿತಿ ಇದ್ದು ಆರೋಪಿಯ ಹುಡುಕಾಟದಲ್ಲಿ ಪೊಲೀಸರು ತೊಡಗಿದ್ದಾರೆ. ಈತ ನಿಜಕ್ಕೂ ಲಾರೆನ್ಸ್ ಬಿಷ್ಣೋಯ್ ಸಹೋದರನೇ ಅಥವಾ ಪ್ರ್ಯಾಂಕ್ ಮಾಡುವ ಉದ್ದೇಶದಿಂದ ಈ ಮೆಸೇಜ್ ಬಂದಿತ್ತೇ ಎನ್ನುವ ಪ್ರಶ್ನೆ ಮೂಡಿದೆ.