ಅಪರಾಧಜಿಲ್ಲೆ

ಹುಬ್ಬಳ್ಳಿಯಲ್ಲಿ ರಾತ್ರೋರಾತ್ರಿ ಸಿಲಿಂಡರ್ ಸ್ಪೋಟ್…..

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಎಂಟು ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಲ್ಲಿನ ಉಣಕಲ್ ಹತ್ತಿರದ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಭಾನುವಾರ ತಡರಾತ್ರಿ ಈ ಭೀಕರವಾದ ಘಟನೆ ನಡೆದಿದೆ.

ಎಂದಿನಂತೆ ಅಯ್ಯಪ್ಪ ಮಾಲಾಧಾರಿಗಳು ತಮ್ಮ ವೃತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ದೆಗೆ ಜಾರಿಗೆ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್’ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಗೊಂಡಿದೆ.

ಪರಿಣಾಮ ದೇವಸ್ಥಾನದಲ್ಲಿ ದೀಪ ಇದ್ದ ಕಾರಣ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 9 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಗೊಂಡ ಅಯ್ಯಪ್ಪ ಮಾಲಾಧಾರಿಗಳನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಸದ್ಯ ಚಿಕಿತ್ಸೆ ಒದಗಿಸಲಾಗುತ್ತಿದ್ದರು ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಇನ್ನು ಗಾಯಗೊಂಡವರ ಮಾಹಿತಿ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button