
ಹುಬ್ಬಳ್ಳಿ: ಯಾವುದೇ ಪರವಾನಗಿಯಿಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎಂಟು ಲಾರಿಗಳನ್ನು ಕೇಶ್ವಾಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನವೀನ ಪಾರ್ಕ್ ಬಳಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಾರಿ ದಳದ ಭೂವಿಜ್ಞಾನಿಗಳಾದ ಬಿಂದನಾ ಪಾಟೀಲ್, ಮೋಹನ್ ಎಸ್ ತಂಡ ದಾಳಿ ಮಾಡಿದೆ.
ದಾಳಿ ಕಾಲಕ್ಕೆ ಪರವಾನಗಿಯಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಬರೋಬರಿ ಎಂಟು ಲಾರಿಗಳ ಮಾಲೀಕರಿಗೆ ನೋಟಿಸ್ ಕೊಟ್ಟು, ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ದೂರಿನ ಅನ್ವಯ ಕೇಶ್ವಾಪುರ ಪೊಲೀಸರು ಸೋಮವಾರ ವಶಕ್ಕೆ ಪಡೆದ ಲಾರಿಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡರು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1




