
ಹುಬ್ಬಳ್ಳಿ: ಅರ್ಟಿಗಾ ಕಾರೊಂದು ರಸ್ತೆ ಕ್ರಾಸ್ ಮಾಡುತ್ತಿದ್ದ ಬ್ರಿಜ್ಜಾ ಕಾರೊಂದಕ್ಕೆ ಗುದಿದ್ದ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿ, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಹುಬ್ಬಳ್ಳಿಯ ಹೊರವಲಯದ ನೂಲ್ವಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಹಾವೇರಿಯತ್ತ ಸಾಗುತ್ತಿದ್ದ ಅರ್ಟಿಗಾ ಕಾರು, ನೂಲ್ವಿ ಕ್ರಾಸ್ ದಿಂದ ರಾಷ್ಟ್ರೀಯ ಹೆದ್ದಾರಿಗೆ ಹತ್ತುತ್ತಿದ್ದ ಬ್ರಿಜ್ಜಾ ಕಾರಿಗೆ ಗುದಿದ್ದೆ. ಪರಿಣಾಮ ಬ್ರಿಜ್ಜಾ ಕಾರಿನಲ್ಲಿದ್ದವರಿಗೆ ಗಂಭೀರವಾಗಿ ಗಾಯಗಳಾಗಿವೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಆಗಮಿಸಿ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಎರಡು ಕಾರುಗಳು ಅಪಘಾತದಲ್ಲಿ ನಜ್ಜುಗುಜ್ಜಾಗಿವೆ. ಈ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1