
ಹುಬ್ಬಳ್ಳಿ: ಇಲ್ಲಿನ ಲಿಂಗರಾಜನಗರದ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ ಸ್ಥಳದಲ್ಲಿ ಭಾನುವಾರ ಆಕಾಶ ವಾಲ್ಮೀಕಿ ಎಂಬಾತನನ್ನು ಮೂವರು ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ Exclusive ಸಿಸಿ ಕ್ಯಾಮರಾ ದೃಶ್ಯಾವಳಿಗಳು ನಿಮ್ಮ “ದಿನವಾಣಿಗೆ” ದೊರೆತ್ತಿದ್ದು, ಇದರಲ್ಲಿ ಕೊಲೆಗಾರರು ಸ್ಕೂಟಿಯಲ್ಲಿ ಮುಂದೆ ಸಾಗುತ್ತಿದ್ದಂತೇ ಮುಂದೆ ಸಿಕ್ಕ ಆಕಾಶ ವಾಲ್ಮೀಕಿ ಮೇಲೆ ಏಕಾಏಕಿ ಎರಗಿ ಮನಬಂದಂತೆ ಚಾಕುವಿನಿಂದ ಇರಿದಿದ್ದಾರೆ.
ಕೊಲೆಯ Exclusive ದೃಶ್ಯಾವಳಿಗಳು…
ಪರಿಣಾಮ ಗಂಭೀರವಾಗಿ ಗಾಯಗೊಂಡ ಆಕಾಶ ಸ್ಥಳದಲ್ಲಿಯೇ ಪ್ರಾಣವನ್ನು ಚೆಲ್ಲಿದ್ದಾ, ಸದ್ಯ ಕೊಲೆ ಮಾಡಿರುವ ದೃಶ್ಯಾವಳಿಗಳು ಎಂತವರನ್ನು ಬೆಚ್ಚಿಬೀಳಿಸುವಂತಿವೆ.
ಈಗಾಗಲೇ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸಿದ್ದು, ಕೊಲೆಗೆ ಕಾರಣವೇನು ಎಂಬುದನ್ನು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಮೃತ ಆಕಾಶ್ ಮೇಲೆ ಒಂದು ಪ್ರಕರಣ ದಾಖಲಾಗಿತ್ತು. ಆಗಾಗ ಎರಡು ಗುಂಪುಗಳ ನಡುವೆ ಗಲಾಟೆ ನಡೆಯುತ್ತಿತ್ತು ಎಂಬ ಮಾಹಿತಿ ಇದೆ. ಕಳೆದ ಶಿವರಾತ್ರಿ ದಿನ ಗಲಾಟೆ ನಡೆದಿತ್ತು. ಅದೇ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಕೊಲೆ ಮಾಡಿದ್ದಾರೆ.
ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದೇವೆ. ಉಳಿದವರ ಬಂಧನಕ್ಕೆ ಜಾಲ ಬೀಸಿದ್ದೇವೆ. ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದರು.