ಅಪರಾಧಜಿಲ್ಲೆರಾಜ್ಯ

ಹುಬ್ಬಳ್ಳಿ ಹೊರವಲಯದಲ್ಲಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್…

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ಪೋಲಿಸರ ಬಂದೂಕು ಸದ್ದು ಮಾಡಿದೆ. ನಗರದ ಹೊರವಲಯದಲ್ಲಿ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್’ನ ಇಬ್ಬರ ಕಾಲಿಗೆ ಫೈರಿಂಗ್ ಮಾಡಲಾಗಿದೆ.

ಆತ್ಮರಕ್ಷಣೆಗೆ ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್​ ಎಸ್.ಆರ್.ನಾಯಕ ನೇತೃತ್ವದ ತಂಡ ಆರೋಪಿಗಳಾದ ಗುಜರಾತ್ ಮೂಲದ ನಿಲೇಶ್, ದಿಲೀಪ್ ಕಾಲಿಗೆ ಗುಂಡು ಹೊಡೆದಿದ್ದಾರೆ.

ದರೋಡೆ ಗ್ಯಾಂಗ್ ಆರೋಪಿಗಳು

ಸೋಮವಾರ ತಡರಾತ್ರಿ ಬೈಕ್ ಮೇಲೆ ಹೊರಟ್ಟಿದ್ದ ಕುಂದಗೋಳ ಮೂಲದ ವ್ಯಕ್ತಿಗೆ ನಾಲ್ಕೈದು ಜನರ ಗುಂಪು ಅಡ್ಡಗಟ್ಟಿ ಬೈಕ್, ನಗದು, ಮೊಬೈಲ್ ಸುಲಿಗೆ ಮಾಡಿ ಹಲ್ಲೆ ಮಾಡಿ ಪರಾರಿಯಾಗಿದ್ದರು.

ಇದಾದ ಸ್ವಲ್ಪ ಸಮಯದಲ್ಲಿ ರವಿಚಂದ್ರ ಎಂಬಾತರನ್ನು ಅಡ್ಡಗಟ್ಟಿ ಸುಲಿಗೆ ಮಾಡಿತ್ತು. ಆಮೇಲೆ ಮಂಟೂರ ರಸ್ತೆಯಲ್ಲಿನ ಶಾರುಕ್ ಎಂಬಾತರ ಮನೆಗೆ ಕನ್ನ ಹಾಕಲು ಯತ್ನಿಸಿದ್ದಾರೆ‌. ಈ ವೇಳೆ ಮನೆಗೆ ಹಲ್ಲು ತೂರಾಟ ಮಾಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಬೆಂಡಿಗೇರಿ ಪಿಐ ಎಸ್.ಆರ್.ನಾಯಕ ನೇತೃತ್ವದ ತಂಡ ಅಲರ್ಟ್ ಆಗಿದ್ದು, ಬೈಕ್ ಮೇಲೆ ಅನುಮಾನಾಸ್ಪವಾಗಿ ಹೋಗುತ್ತಿದ್ದವರ ತಪಾಸಣೆಗೆ ಮುಂದಾಗಿದ್ದರು.

ಅದರಂತೆ ಪಿಎಸ್ಐ ಅಶೋಕ ಹಾಗೂ ಇನ್ನಿಬ್ಬರು ಸಿಬ್ಬಂದಿಗಳು ಹುಬ್ಬಳ್ಳಿಯ ಹೊರವಲಯದ ಬಿಡನಾಳ ಸಮೀಪದಲ್ಲಿ ತಪಾಸಣೆ ನಡೆಸುವ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ದರೋಡೆಕೋರರು ಎಸ್ಕೇಪ್ ಆಗಲು ಮುಂದಾಗಿದ್ರು, ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು 4 ಸುತ್ತು ಗುಂಡು ಹಾರಿಸಿದರು. ಬಳಿಕ ಇಬ್ಬರು ಆರೋಪಿಗಳ ಕಾಲಿಗೆ ತಲಾ ಒಂದೊಂದು ಗುಂಡು ಹೊಡೆದರು. ಬಳಿಕ, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸದ್ಯ ಗುಂಡೇಟು ತಿಂದ ದಿಲೀಪ್ & ನಿಲೇಶ್ ‘ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆಯಲ್ಲಿ ಪಿಎಸ್ಐ ಅಶೋಕ, ಮತ್ತು ಪೇದೆಗಳಾದ ಶರಣು ಹಾಗೂ ಮತ್ತೊರ್ವ ಸಿಬ್ಬಂದಿಗೆ ಗಾಯವಾಗಿದೆ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಿಮ್ಸ್’ಗೆ ಭೇಟಿ ನೀಡಿದ ಕಮಿಷನರ್ ಎನ್.ಶಶಿಕುಮಾರ್:

ಎನ್.ಶಶಿಕುಮಾರ್, ಪೊಲೀಸ್ ಆಯುಕ್ತರು, ಹು-ಧಾ ಪೊಲೀಸ್ ಕಮಿಷನರೇಟ್

ದರೋಡೆಕೋರರ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಎನ್‌. ಶಶಿಕುಮಾರ್ ಭೇಟಿ ನೀಡಿ, ಗಾಯಗೊಂಡ ಪೊಲೀಸ್ ಸಿಬ್ಬಂದಿ ಆರೋಗ್ಯ ವಿಚಾರಿಸಿದರು. ಅಲ್ಲದೇ ಗಾಯಗೊಂಡ ಇಬ್ಬರು ಆರೋಪಿಗಳನ್ನು ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳು ಹಲವಾರು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದರು.

ಗುಜರಾತ್ ನಿಂದ ಬಂದು ಕಳ್ಳತನ ಮಾಡಿ ಮತ್ತೆ ಎಸ್ಕೇಪ್ ಆಗುತ್ತಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ದರೋಡೆ ಪ್ರಕರಣಗಳ ಹಿನ್ನೆಲೆಯಲ್ಲಿ ಅವಳಿ ನಗರದಲ್ಲಿ ನಾಕಾಬಂದಿ ಹಾಕಲಾಗಿತ್ತು. ಅವಳಿ ನಗರದಲ್ಲಿ 17 ಕಡೆ ನಾಕಾಬಂದಿ ಹಾಕಲಾಗಿತ್ತು. ಅದರಂತೆ ಸೋಮವಾರ ತಡರಾತ್ರಿ ದಡೋರೆಗೆ ಯತ್ನಿಸಿ ಅನುಮಾನಾಸ್ಪದವಾಗಿ ಬೈಕ್ ಮೇಲೆ ವೇಗವಾಗಿ ಹೋಗುತ್ತಿದ್ದವರ ತಪಾಸಣೆಗೆ ಮುಂದಾಗಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಎಸ್ಕೇಪ್ ಆಗಲು ಯತ್ನಿಸಿದ್ದರು.
ಪಿಎಸ್ಐ ಅಶೋಕ್ ಸೇರಿ ಮುವ್ವರು ಸಿಬ್ಬಂದಿಗೆ ಗಾಯವಾಗಿದೆ. ಈ ವೇಳೆ ಪೊಲೀಸರು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ತಲಾ ಒಂದು ಗುಂಡು ತಾಗಿದೆ.
ಇತರೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಗುಂಡೇಟು ತಿಂದ ದಿಲೀಪ್ ಮತ್ತು ನೀಲೇಶ್ ಗುಜರಾತ್ ಮೂಲದವರು. ಇಬ್ಬರು ಆರೋಪಿಗಳ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಹುಬ್ಬಳ್ಳಿಯ ಜೈನ್ ಮಂದಿರದ ಹುಂಡಿಯಲ್ಲಿದ್ದ 4 ಲಕ್ಷ ಕದ್ದಿದ್ದರು. ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಅಂಗಡಿಗಳಿಗೆ ಕನ್ನ ಹಾಕಿದ್ದರು. ಇವರ ಮೇಲೆ ಗದಗ, ಬಳ್ಳಾರಿ, ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಇವರ ಮೇಲೆ 15 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಉಳಿದ ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button