Top Newsಅಪರಾಧ

ಸ್ನೇಹಿತರ ನಡುವಿನ ಕಲಹ ಕೊಲೆಯಲ್ಲಿ ಅಂತ್ಯ

ಹುಬ್ಬಳ್ಳಿ: ತಾಯಿಗೆ ಬೈದ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ಸ್ನೇಹಿತನನ್ನು ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.

ಬಿಹಾರ ಮೂಲದ ವಿಕಲಾಂಗ ಚೇತನ ಮಿತೇಶ ಮೃತ ವ್ಯಕ್ತಿಯಾಗಿದ್ದಾನೆ. ಈತನಿಗೆ ರಾಜೇಶ ಕುಮಾರ್ ಅಲಿಯಾಸ್ ನಜೀರ್ ಖಾನ್ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ.

ರವಿವಾರ ರಾಜೇಶಕುಮಾರ್ ಮದ್ಯಸೇವನೆ ಅಮಲಿನಲ್ಲಿ ಮಿತೇಶನೊಂದಿಗೆ ತಂಟೆ ತೆಗೆದು, ಅವರ ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಾನೆ. ಬಳಿಕ ಜಗಳ ವಿಕೋಪಕ್ಕೆ ಹೋಗಿ ರಾಜೇಶ ಮಿತೇಶನಿಗೆ ಮೈಕ್ ಸೆಟ್’ನಿಂದ ತಲೆಗೆ ಹೊಡೆದಿದ್ದಾನೆ. ಪರಿಣಾಮ ಮಿತೇಶ ಗಂಭೀರವಾಗಿ ಗಾಯಗೊಂಡು ಸಾವುಬದುಕಿನ ಮಧ್ಯೆ ಹೋರಾಟ ನಡೆಸಿದ್ದ, ಈ ವೇಳೆ ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಲು ಯತ್ನಿಸಿದರು ಸಹ ರಾಜೇಶ ಮಾರ್ಗಮಧ್ಯದಲ್ಲಿ ಅಸುನೀಗಿದ್ದಾನೆಂದು ತಿಳಿದುಬಂದಿದೆ.

ಇನ್ನು ಮೃತ ಮಿತೇಶ ಮತ್ತು ಕೊಲೆಗೈದ ರಾಜೇಶ್ ಸ್ನೇಹಿತರಾಗಿದ್ದು, ಇಬ್ಬರು ಬಿಹಾರಿ ಮೂಲದವರಾಗಿದ್ದಾರೆ.

ಅಂಗವೈಕಲ್ಯ ಹಿನ್ನೆಲೆಯಲ್ಲಿ ಇಲ್ಲಿನ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು, ಭೀಕ್ಷೆ ಬೇಡಿ ಜೀವನ ನಡೆಸುತ್ತಿದ್ದರು, ಆದರೆ ರವಿವಾರ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವಿನ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ.

ಸದ್ಯ ವಿಷಯ ತಿಳಿಯುತ್ತಿದ್ದಂತೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button