ಕೊಟಗೊಂಡಹುಣಸಿ ಸರ್ಕಾರಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
ಹುಬ್ಬಳ್ಳಿ: ಈ ದಿನವು ನಮ್ಮ ದೇಶದ ಏಕತೆ ಮತ್ತು ಭ್ರಾತೃತ್ವವನ್ನು ಎತ್ತಿ ಹಿಡಿಯುವ ದಿನವಾಗಿದೆ. ಮುಖ್ಯವಾಗಿ ಈ ಸಂದರ್ಭದಲ್ಲಿ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನೆನಪಿಟ್ಟುಕೊಳ್ಳಬೇಕು ಮತ್ತು ಅವರ ಆಶಯಗಳನ್ನು ಈಡೇರಿಸಲು ಶ್ರಮಿಸಬೇಕು ಎಂದು ಅದರಗುಂಚಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಮೃತ ಹಡಪದ ಹೇಳಿದರು.

ಇವರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇದಕ್ಕೂ ಮುನ್ನ ಎಸ್ಡಿಎಂಸಿ ಅಧ್ಯಕ್ಷರಾದ ಬಸವರಾಜ ಸೋಮಕ್ಕನವರ ಧ್ವಜಾರೋಹಣ ನೇರವೇರಿಸಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಮುಕ್ತುಂಹುಸೇನ ಬಡಿಗೇರ್, ಹೊನ್ನಪ್ಪ ಸೋಲಾರಗೊಪ್ಪ, ಬಸಮ್ಮ ಮಾಳಗಿ, ಗ್ರಾಮದ ಮುಖಂಡರಾದ ಅಶೋಕ ಸೋಲಾರಗೊಪ್ಪ, ಯಲ್ಲಪ್ಪ ಸೋಲಾರಗೊಪ್ಪ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.




