ನಾಯಕತ್ವ ಗುಣ ಬೆಳೆಯಲು NSS ಅತ್ಯಗತ್ಯ- ದದ್ದಾಪುರಿ

ಧಾರವಾಡ: ಧಾರವಾಡದ ಸೋನಿಯಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ 2025-26 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಶೈಕ್ಷಣಿಕ ಸಾಂಸ್ಕೃತಿಕ. ಎನ್.ಎಸ್ ಎಸ್ ಘಟಕ. ಹಾಗೂ ಕ್ರೀಡಾ ಚಟುವಟಿಗಳ ಉದ್ಘಾಟನಾ ಸಮಾರಂಭವನ್ನು ಕಾಲೇಜಿನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಾಗೂ ಉದ್ಘಾಟಕರಾಗಿ ಕವಿವಿ ಧಾರವಾಡದ ಸಿಂಡಿಕೇಟ್ ಸದಸ್ಯರಾದ ರಾಬರ್ಟ್ ದದ್ದಾಪುರಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣ ಅತಿ ಮುಖ್ಯವಾಗಿದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಎನ್ಎಸ್ಎಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಅತಿ ಮುಖ್ಯವಾಗಿದೆ. ಇದರಿಂದ ದೇಶದ ಸಮಗ್ರ ಅಭಿವೃದ್ಧಿ ಮತ್ತು ಸರ್ಕಾರದ ಯೋಜನೆಗಳ ಮುಖಾಂತರ ಜನರ ಪೂರಕವಾದ ಕೆಲಸಗಳನ್ನು ಎನ್ಎಸ್ಎಸ್ ಮೂಲಕ ವಿದ್ಯಾರ್ಥಿಗಳು ಕೆಲಸ ಮಾಡಲು ಸಹಾಯಕ. ಅಲ್ಲದೆ ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಆದರ್ಶ ವ್ಯಕ್ತಿಯಾಗಿ ಬೆಳೆಯಲು ಸಹಾಯವಾಗುತ್ತದೆ ಎಂದರು.

ಇದೇ ವೇಳೆ ಬಿಎ ಬಿಕಾಂ ಅಂತಿಮ ವರ್ಷದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಮತ್ತು ಕಾಲೇಜಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರು ಸೇರಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸೋನಿಯಾ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ. ಎಚ್. ವಿ .ಡಂಬಳ್, ಉಪಾಧ್ಯಕ್ಷರಾದ ರೂಪಾ ಎಚ್ ಡಂಬಳ್, ಸೋನಿಯಾ ಎಚ್ ಡಂಬಳ, ಎಚ್ ವಿ ಡಂಬಳ್, ನವೀನ್ ಎಚ್. ಸಂಬಳ, ಆಕಾಶ್ ಡಂಬಳ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಕಾಶ್ ಜೋಗಿನ್ ಮತ್ತು ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಿರೂಪಣೆಯನ್ನು ಕಾಲೇಜಿನ ಕನ್ನಡ ಉಪನ್ಯಾಸಕಿಯರಾದ ಲಕ್ಷ್ಮಿ ಕುರಿ ನಡೆಸಿಕೊಟ್ಟರು. ಸ್ವಾಗತ ಮತ್ತು ಮುಖ್ಯ ಅತಿಥಿಗಳ ಪರಿಚಯವನ್ನು ಪ್ರೊ ವಿನಯ ಕುಲಕರ್ಣಿ ಮಾಡಿದರು. ಎನ್ ಎಸ್ ಎಸ್ ಗೀತೆ ಮತ್ತು ಎನ್ ಎಸ್ ಎಸ್ ಪ್ರತಿಜ್ಞ ವಿಧಿಯನ್ನು ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ. ಗಂಗಾಧರ. ಎಸ್. ಮರಳಿಹಳ್ಳಿ ಬೋಧಿಸಿದರು.




