Top Newsಜಿಲ್ಲೆರಾಜ್ಯ

ಹುಬ್ಬಳ್ಳಿ ಹಳೇ ಬಸ್ ನಿಲ್ದಾಣಕ್ಕೆ ಡಾ.ರಾಜಕುಮಾರ ಹೆಸರಿಡಿ ಉದ್ಯಮಿ ಶ್ರೀಗಂಧ ಶೇಟ್

ಹುಬ್ಬಳ್ಳಿ: ಉತ್ತರ ಕರ್ನಾಟಕದ ಸಾಂಸ್ಕೃತಿಕ ಅಸ್ಮಿತೆ ಮತ್ತು ಕನ್ನಡ ನಾಡು-ನುಡಿಯ ರಕ್ಷಣೆಗಾಗಿ ಕರ್ನಾಟಕ ಕನ್ನಡಿಗರ ನಾಮಕರಣ ಚಳುವಳಿ ಸಂಘಟನೆ ವತಿಯಿಂದ ಹುಬ್ಬಳ್ಳಿಯ ಬಸ್ ನಿಲ್ದಾಣಗಳಿಗೆ ಮಹನೀಯರ ನಾಮಕರಣ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಫೆಬ್ರವರಿ 8 ರಂದು ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ಕನ್ನಡಿಗರ ನಾಮಕರಣ ಚಳುವಳಿಯ ಯುವ ಅಧ್ಯಕ್ಷ ಶ್ರೀಗಂಧ ಶೇಟ್ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ರಾಣಿ ಚೆನ್ನಮ್ಮ ವೃತ್ತದ ಬಳಿಯ ಹಳೆಯ ಕೇಂದ್ರ ಬಸ್ ನಿಲ್ದಾಣಕ್ಕೆ ಡಾ.ರಾಜಕುಮಾರ ಬಸ್ ನಿಲ್ದಾಣ ಹಾಗೂ ಗೋಕುಲರಸ್ತೆಯ ಹೊಸ ಬಸ್ ನಿಲ್ದಾಣಕ್ಕೆ ಸಿಂಧೂರ ಲಕ್ಷ್ಮಣ ಅವರ ಹೆಸರನ್ನು ಇಡಬೇಕು ಎಂದು ಆಗ್ರಹಿಸಿದರು.

ಇದಲ್ಲದೇ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ವೀರ ಮಹನೀಯರ ನಾಮಕರಣ ಮಾಡುವ ಒತ್ತಾಯ ಮಾಡುತ್ತೇವೆ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ನೀಡಲಾಗಿದೆ. ಆದರೆ ಈವರೆಗೆ ಸ್ಪಂದನೆ ದೊರೆತಿಲ್ಲ. ಹೀಗಾಗಿ ಮಾರ್ಚ್ 28 ರಂದು ಬೃಹತ್ ಹೋರಾಟ ಮಾಡಲು ನಿರ್ಧರಿಸಲಾಗಿದೆ. ಅದರೊಳಗೆ ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರನ್ನು ಇಟ್ಟು ಕನ್ನಡಿಗರ ಅಸ್ಮೀತೆ ಕಾಪಾಡಬೇಕಿದೆ. ಇಲ್ಲವಾದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದರು.

ಹೋರಾಟದ ಪೂರ್ವಭಾವಿಯಾಗಿ ಫೆಬ್ರವರಿ 16 ರಂದು ಬೆಂಗಳೂರಿನಲ್ಲಿ ಹಿರಿಯ ನಟಿ ಜಯಮಾಲಾ, ನಟಿ ಪೂಜಾ ಗಾಂಧಿ ಅವರೊಂದಿಗೆ ಸಭೆ ನಡೆಸಲಿದ್ದೇವೆ. ಬಳಿಕ ಸುಮಾರು 50 ಸಾವಿರಕ್ಕೂ ಅಧಿಕ ಜನರನ್ನು ಒಟ್ಟುಗೂಡಿಸಿ ಬೃಹತ್ ಚಳುವಳಿಯನ್ನು ಹುಬ್ಬಳ್ಳಿಯಲ್ಲಿ ಮಾಡಲಾಗುವುದು. ಅಂದು ಮೂರುಸಾವಿರಮಠದಿಂದ ಚೆನ್ನಮ್ಮ ಸರ್ಕಲ್ ವರೆಗೆ ಚಳುವಳಿ ನಡೆಯಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಾನಂದ ಮುತ್ತಣ್ಣವರ, ಚಂದ್ರಶೇಖರ ಜುಟ್ಟಲ ಸೇರಿದಂತೆ ಮುಂತಾದವರು ಇದ್ದರು.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button