ಜಿಲ್ಲೆರಾಜಕೀಯ

ಹು-ಧಾ ಕಾಂಗ್ರೆಸ್ ಸೇವಾದಳ ಮಹಿಳಾ ಜಿಲ್ಲಾಧ್ಯಕ್ಷರಾಗಿ ಜುಬೇದಾ ನದಾಫ್ ನೇಮಕ

ಹುಬ್ಬಳ್ಳಿ: ಅಖಿಲ ಭಾರತ ಕಾಂಗ್ರೆಸ್ ಸೇವಾದಳ ಅಧ್ಯಕ್ಷರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಅನುಮೋದನೆ ಮೇರೆಗೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ನಿವಾಸಿ ಜುಬೇದಾ ನದಾಫ್ ಅವರನ್ನು ಹುಬ್ಬಳ್ಳಿ–ಧಾರವಾಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಮಹಿಳಾ ಜಿಲ್ಲಾಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಪಕ್ಷ ನೀಡಿದ ಜವಾಬ್ದಾರಿಗಳನ್ನು ನಿಷ್ಠೆಯಿಂದ ಮತ್ತು ಅಚ್ಚುಕಟ್ಟಾಗಿ ನಿರ್ವಹಿಸಿರುವ ಜುಬೇದಾ ನದಾಫ್ ಅವರ ಸೇವೆಯನ್ನು ಪರಿಗಣಿಸಿ ಈ ಸ್ಥಾನಮಾನ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪಕ್ಷದ ಬಲವರ್ಧನೆ, ಮಹಿಳಾ ಸಂಘಟನೆಗಳ ಸಕ್ರಿಯತೆ ಮತ್ತು ನೆಲಮಟ್ಟದ ಕಾರ್ಯಕರ್ತರ ಸಂಘಟನೆಗೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಅವರ ನೇಮಕ ಮಹತ್ವದ್ದಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button