ಜಿಲ್ಲೆ

ನಶೆ ಮುಕ್ತ ಭಾರತ ಅಭಿಯಾನ: ವಿದ್ಯಾರ್ಥಿಗಳಿಂದ ಪ್ರತಿಜ್ಞೆ, ಚಿತ್ರಕಲೆ–ರಂಗೋಲಿ ಸ್ಪರ್ಧೆ

ಹುಬ್ಬಳ್ಳಿ: ಮಹಾತ್ಮ ಗಾಂಧೀ ಸುಳ್ಳ ಗ್ರಾಮ ಪಂಚಾಯಿತಿ ಕಾರ್ಯಾಲಯದ ವತಿಯಿಂದ ಶಿವಾನಂದ ಭಾರತಿ ಮಾಧ್ಯಮಿಕ ಶಾಲೆಯಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಶೆ ಮುಕ್ತ ಭಾರತ ನಿರ್ಮಾಣದ ಕುರಿತು ಪ್ರತಿಜ್ಞೆ ಸ್ವೀಕರಿಸಿದರು. ಬಳಿಕ ವಿದ್ಯಾರ್ಥಿಗಳಲ್ಲಿ ನಶೆಮುಕ್ತ ಸಮಾಜದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರಕಲೆ, ರಂಗೋಲಿ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು, ನಶೆ ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಗ್ರಾಮ ಪಂಚಾಯಿತಿ ಸಿಬ್ಬಂದಿ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು, ಗ್ರಂಥಪಾಲಕರು, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button