Top NewsUncategorizedಆರೋಗ್ಯಜಿಲ್ಲೆ

ಕರ್ನಾಟಕ ರಾಜ್ಯೋತ್ಸವ ರನ್‌ಗೆ ಹೆಚ್‌ಸಿಜಿ ಸುಚಿರಾಯು ಆಸ್ಪತ್ರೆ ವೈದ್ಯಕೀಯ ನೆರವು

ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವದ ಸಂಭ್ರಮದೊಂದಿಗೆ ಆರೋಗ್ಯ ಮತ್ತು ಫಿಟ್‌ನೆಸ್ ಜಾಗೃತಿ ಮೂಡಿಸುವ ಉದ್ದೇಶದಿಂದ ಹುಬ್ಬಳ್ಳಿಯ ಡೆಕಾಥಾನ್‌ನಲ್ಲಿ ಅಬ್ಬೆಷನ್ ರನ್ ಕ್ಲಬ್ ಆಯೋಜಿಸಿದ್ದ ‘ಕರ್ನಾಟಕ ರಾಜ್ಯೋತ್ಸವ ರನ್’ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಹೆಚ್‌ಸಿಜಿ ಸುಚಿರಾಯು ಆಸ್ಪತ್ರೆ ವೈದ್ಯಕೀಯ ಪಾಲುದಾರರಾಗಿ ಕೈಜೋಡಿಸಿತು.

3ಕೆ ಮತ್ತು 5ಕೆ ವಿಭಾಗಗಳಲ್ಲಿ ನಡೆದ ಓಟದಲ್ಲಿ ಓಟಪ್ರಿಯರು ಸೇರಿದಂತೆ 200ಕ್ಕೂ ಹೆಚ್ಚು ಮಂದಿ ಉತ್ಸಾಹದಿಂದ ಪಾಲ್ಗೊಂಡು ಆರೋಗ್ಯಕರ ಜೀವನಶೈಲಿಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಹೆಚ್‌ಸಿಜಿ ಸುಚಿರಾಯು ಆಸ್ಪತ್ರೆಯ ವತಿಯಿಂದ ಭಾಗವಹಿಸಿದವರಿಗೆ ಮೂಲ ಆರೋಗ್ಯ ತಪಾಸಣೆ, ಆಂಬ್ಯುಲೆನ್ಸ್ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಯಿತು.

ಈ ಕುರಿತು ಮಾತನಾಡಿದ ಆಸ್ಪತ್ರೆಯ ಮುಖ್ಯ ಕಾರ್ಯಾಚರಣಾಧಿಕಾರಿ ಮಂಜುನಾಥ್ ಎಚ್.ಡಿ., ಆರೋಗ್ಯ ಸೇವೆ ಆಸ್ಪತ್ರೆಯ ನಾಲ್ಕು ಗೋಡೆಗಳಿಗೆ ಸೀಮಿತವಾಗಬಾರದು. ಜನರಲ್ಲಿ ಆರೋಗ್ಯದ ಅರಿವು ಮೂಡಿಸುವುದು ಮತ್ತು ದೈಹಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ಕೂಡ ನಮ್ಮ ಜವಾಬ್ದಾರಿಯಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಆಸ್ಪತ್ರೆ ಸದಾ ಬದ್ಧವಾಗಿದೆ ಎಂದರು.

ಅಬ್ಬೆಷನ್ ರನ್ ಕ್ಲಬ್‌ನ ಅಕ್ಷಯ್ ಕುಮಾರ್ ಬಳ್ಳಾರಿ ಮಾತನಾಡಿ, ಓಟ ಕೇವಲ ದೈಹಿಕ ವ್ಯಾಯಾಮವಲ್ಲ, ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವ ಪ್ರೇರಣೆಯಾಗಿದೆ. ಕಾರ್ಯಕ್ರಮಕ್ಕೆ ವೈದ್ಯಕೀಯ ಪಾಲುದಾರರಾಗಿ ಸಹಕಾರ ನೀಡಿದ ಹೆಚ್‌ಸಿಜಿ ಸುಚಿರಾಯು ಆಸ್ಪತ್ರೆಯ ಬೆಂಬಲದಿಂದ ಓಟಗಾರರಿಗೆ ಸುರಕ್ಷಿತ ಹಾಗೂ ಉತ್ತಮ ವೈದ್ಯಕೀಯ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.

ಸಮುದಾಯದ ಆರೋಗ್ಯ ಜಾಗೃತಿ ಮತ್ತು ಸದೃಢ ಸಮಾಜ ನಿರ್ಮಾಣದ ಆಶಯದೊಂದಿಗೆ ಹೆಚ್‌ಸಿಜಿ ಸುಚಿರಾಯು ಆಸ್ಪತ್ರೆ ಇಂತಹ ಸಾಮಾಜಿಕ ಹಾಗೂ ಆರೋಗ್ಯ ಸಂಬಂಧಿತ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button