Top Newsಅಪರಾಧಜಿಲ್ಲೆ

ಗಬ್ಬೂರಿನಲ್ಲಿ ನಡುರಸ್ತೆಯಲ್ಲಿ ಕೊಲೆಯತ್ನ ಪ್ರಕರಣ…

ಹುಬ್ಬಳ್ಳಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಗಬ್ಬೂರಿನಲ್ಲಿ ನಡುರಸ್ತೆಯಲ್ಲಿಯೇ ವ್ಯಕ್ತಿಯೊರ್ವನ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿತ್ತು. ಈ ಕುರಿತು ಬೆಂಡಿಗೇರಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಕಳೆದ ಶುಕ್ರವಾರ ಗಬ್ಬೂರಿನ ನಿವಾಸಿ ಮನೋಹರ ಚಾಕಲಬ್ಬಿ ಎಂಬಾತನ ಮೇಲೆ ಕೊಲೆಯತ್ನ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮನೋಹನನನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ‌.

ಬಳಿಕ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಇನ್ಸ್ಪೆಕ್ಟರ್ ಎಸ್.ಆರ್.ನಾಯಕ, ಡಿಸಿಪಿ ಮಹನಿಂಗ ನಂದಗಾವಿ, ಎಸಿಪಿ ಶಿವಪ್ರಕಾಶ್ ನಾಯ್ಕ ದೌಡಾಯಿಸಿ ಪರಿಶೀಲನೆ ನಡೆಸಿದರು.

ಆ ಬಳಿಕ ಕೊಲೆಯತ್ನ ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆಯನ್ನು ಕೈಗೆತ್ತಿಕೊಂಡ ಬೆಂಡಿಗೇರಿ ಠಾಣೆಯ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಪರಶುರಾಮ ಉಪ್ಪಾರ, ಮಹದೇವ ಇರಗಣ್ಣವರ, ಕುಮಾರ ಬಡಿಗೇರ ಎಂದು ಗುರುತಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ರವಿ ವಡ್ಡರ್, ಅಶೋಕ ಹಾಗೂ ಕ್ರೈಂ ಸಿಬ್ಬಂದಿಗಳು ಇದ್ದರು.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button