ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇ 1ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಅಂದು ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಪರ ಮತಯಾಚನೆ ನಡೆಸುವರು. ಮೇ 1ರಂದು ಮಧ್ಯಾಹ್ನ 3.30ಕ್ಕೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಸಾರ್ವಜನಿಕ ಬಹಿರಂಗ ಸಭೆ ಉದ್ದೇಶಿಸಿ ಗೃಹ ಸಚಿವ ಅಮಿತ್ ಶಾ ಮಾತನಾಡಲಿದ್ದು, ಪ್ರಲ್ಹಾದ ಜೋಶಿ ಪರ ಪ್ರಚಾರ ನಡೆಸುವರು.
ಕಳೆದ ನಾಲ್ಕೈದು ದಿನಗಳ ಹಿಂದಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧಾವಿಸಿ ಜೋಶಿ ಪರ ಮತಯಾಚಿಸಿ, ಪಕ್ಷದ ಪ್ರಮುಖರ ಸಭೆ ಮಾಡಿ ಹೋಗಿದ್ದರು. ಅದರ ಬೆನ್ನಲ್ಲೇ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಲ್ಹಾದ್ ಜೋಶಿ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
1
+1
+1
+1
+1