Top Newsಜಿಲ್ಲೆದೇಶರಾಜಕೀಯರಾಜ್ಯ

ನೇಹಾ ಕುಟುಂಬಸ್ಥರನ್ನು ಭೇಟಿಯಾದ ಕೇಂದ್ರ ಗೃಹ ಸಚಿವ ಅಮಿತ್ ಶಾ..

ಹುಬ್ಬಳ್ಳಿ: ನೇಹಾ ಹತ್ಯೆ ಈಗಾಗಲೇ ದೇಶ, ವಿದೇಶದಲ್ಲಿ ಸದ್ದು ಮಾಡುತ್ತಿದೆ. Justice for Neha ಎಂಬ ಅಭಿಯಾನ ಆರಂಭವಾಗಿದೆ. ಈ ನಡುವೆ ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇಹಾ ಪೋಷಕರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರ ಪರವಾಗಿ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಆಗಮಿಸಿದ್ದ ಅಮಿತ್ ಶಾ, ನೇಹಾ ಕುಟುಂಬವನ್ನು ನೆಹರೂ ಮೈದಾನದ ಮುಖ್ಯ ವೇದಿಕೆಯ ಹಿಂಭಾಗದಲ್ಲಿ ಭೇಟಿಯಾಗಿ ಮಾತನಾಡಿದರು.

ಈ ವೇಳೆ ನೇಹಾ ಪೋಷಕರು ಆದಷ್ಟು ಬೇಗ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಸಚಿವರು ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೆ, ನಾವಿದ್ದೇವೆ ಹೆದರಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು.

ನೇಹಾ ಪೋಷಕರು ಗೃಹ ಸಚಿವರಿಗೆ ಸಲ್ಲಿಸಿರುವ ಮನವಿ ಪತ್ರ

ಇದಕ್ಕೂ ಪೂರ್ವದಲ್ಲಿ ತಮ್ಮ ಭಾಷಣದಲ್ಲಿ ನೇಹಾ ಕೊಲೆ ಬಗ್ಗೆ ಮಾತನಾಡಿ, ಈ ಪ್ರಕರಣಕ್ಕೆ ಯಾರು ಹೊಣೆ? ಮಹಿಳೆಯರಿಗೆ ಕರ್ನಾಟಕ ಸುರಕ್ಷಿತವಲ್ಲ, ಈ ಆತಂಕವಾದಕ್ಕೆ ಅಂತ್ಯ ಹಾಡಬೇಕೆಂದ್ರೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಸೇರಿದಂತೆ ಮುಂತಾದವರು ಇದ್ದರು.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button