ಹುಬ್ಬಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಜೂಜಾಡುತ್ತಿರುವವರ ಬೆನ್ನು ಬಿದ್ದಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಜೂಜು ಅಡ್ಡೆಗಳನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳನ್ನು ಬಂಧಿಸುತ್ತಿದ್ದಾರೆ.
ಹೌದು, ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಚಿನ್ ಅಲಮೇಲ್ಕರ್, ಚಾಮುಂಡೇಶ್ವರಿ ಬೆಳಗಾಂವ್ಕರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಒಟ್ಟು 16 ಜನರನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲದೇ ಬಂಧಿತರಿಂದ 36,700 ರೂ ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ, ನೂಲ್ವಿ & ಛಬ್ಬಿಯಲ್ಲಿ ನಡೆಸಲಾಗುತ್ತಿದ್ದ ಜೂಜಾಟದ ಅಡ್ಡೆಯ ಮೇಲೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ಮಾಡಿ, ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1