
ಬೆಂಗಳೂರು : ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳ ಬಜೆಟ್, ಪ್ರತಿಯೊಬ್ಬ ಭಾರತೀಯನ ಕನಸುಗಳನ್ನು ನನಸು ಮಾಡುವ ಬಜೆಟ್ ಇದಾಗಿದೆ. ಇದು ಅಭಿವೃದ್ಧಿ ಹೊಂದಿದ ಭಾರತ ಯೋಜನೆಗೆ ಸಹಕಾರಿಯಾಗಲಿದೆ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾದ ಪ್ರೀತಿ ಹೊನ್ನಗುಡಿ ಹೇಳಿದರು.
ಕೇಂದ್ರ ಬಜೆಟ್ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಜೆಟ್ ದೇಶದ ನಾಗರಿಕರ ಜೇಬು ಹೇಗೆ ತುಂಬುತ್ತದೆ, ದೇಶದ ನಾಗರಿಕರ ಉಳಿತಾಯ ಹೇಗೆ ಹೆಚ್ಚಾಗುತ್ತದೆ ಮತ್ತು ದೇಶದ ನಾಗರಿಕರು ಅಭಿವೃದ್ಧಿಯಲ್ಲಿ ಹೇಗೆ ಪಾಲುದಾರರಾಗುತ್ತಾರೆ? ಅದಕ್ಕೆ ಈ ಬಜೆಟ್ ಭದ್ರ ಬುನಾದಿ ಹಾಕಿದೆ.
ಈ ಬಜೆಟ್‌ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ನ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಬಜೆಟ್ ನಲ್ಲಿ ರೈತರಿಗಾಗಿ ಹಲವು ಘೋಷಣೆಗಳನ್ನು ಮಾಡಲಾಗಿದೆ. ಈ ಬಜೆಟ್ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡಲಿದೆ. ಇದು ನಾಗರಿಕರ ಜೇಬು ತುಂಬಿಸುವ ಬಜೆಟ್ ಎಂದು ತಿಳಿಸಿದ್ದಾರೆ.
ಈ ಬಜೆಟ್‌ನಿಂದ ಸ್ವಾವಲಂಬಿ ಭಾರತಕ್ಕೆ ವೇಗ ಸಿಗಲಿದೆ. ಬಜೆಟ್‌ನಲ್ಲಿ ಮಧ್ಯಮ ವರ್ಗದವರನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಈ ಬಜೆಟ್‌ನಲ್ಲಿ ಸ್ಟಾರ್ಟಪ್‌ಗಳಿಗೆ ಹೊಸ ಸಾಲವನ್ನು ಘೋಷಿಸಲಾಗಿದೆ.
ಮುಖ್ಯವಾಗಿ ಭಾರತದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲೆಗೊಂದು ಡೇ ಕೇರ್ ಕ್ಯಾನ್ಸರ್ ಆಸ್ಪತ್ರೆಯನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ. ಇದು ಬಹಳ ಒಳ್ಳೆಯದಾಗಿದೆ.
ಈ ಬಜೆಟ್ ದೇಶದಲ್ಲಿ ಹೆಚ್ಚಾಗಿರುವ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವಂತಿದೆ. ಆದಾಯ ತೆರಿಗೆಯಲ್ಲಿ ಸಾಕಷ್ಟು ವಿನಾಯಿತಿ ಈ ಬಜೆಟ್ ನಲ್ಲಿ ನೀಡಲಾಗಿದೆ. 12 ಲಕ್ಷ ರೂ.ಗಳವರೆಗೆ ವಿನಾಯಿತಿ ನೀಡಿರುವುದು ಬಂಪರ್ ಕೊಡುಗೆ ಯಾಗಿದೆ, ಎಲ್ಲಾ ತೆರಿಗೆದಾರರಿಗೆ ಇದರಿಂದ ಅನುಕೂಲ ಆಗಲಿದೆ ಎಂದಿದ್ದಾರೆ.
ಈ ಬಜೆಟ್ ಜನರದ್ದು. ಇದು ಜನತಾ ಜನಾರ್ದನ ಬಜೆಟ್. ಇದಕ್ಕಾಗಿ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಮತ್ತು ಅವರ ಇಡೀ ತಂಡವನ್ನು ಅಭಿನಂದಿಸುತ್ತೇನೆ. ಇಂದು ದೇಶ ಅಭಿವೃದ್ಧಿ ಮತ್ತು ಪರಂಪರೆಯ ಮೇಲೆ ಸಾಗುತ್ತಿದೆ ಎಂದು ಹೇಳಿದ್ದಾರೆ.