ಆರ್‌ಡಿಸಿ ಪರೇಡ್‌ನಲ್ಲಿ ಸಾಧನೆಗೈದ ಕೆಡೆಟ್ಗಳಿಗೆ ಸನ್ಮಾನ

ಹುಬ್ಬಳ್ಳಿ: ಕೆ.ಎಲ್.ಇ. ಸಂಸ್ಥೆಯ ಅಧೀನದಲ್ಲಿರುವ ಶ್ರೀ ಕಾಡಸಿದ್ದೇಶ್ವರ ಕಲಾ ಮತ್ತು ಎಚ್.ಎಸ್. ಕೋತಂಬ್ರಿ ವಿಜ್ಞಾನ ಮಹಾವಿದ್ಯಾಲಯದಲ್ಲಿ 2025–26ನೇ ಸಾಲಿನ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಆರ್‌ಡಿಸಿ (RDC) ಪರೇಡ್ ಕ್ಯಾಂಪಿನಲ್ಲಿ ಭಾಗವಹಿಸಿ ಸಂಸ್ಥೆಗೆ ಕೀರ್ತಿ ತಂದ ಹೆಮ್ಮೆಯ ಎನ್‌ಸಿಸಿ ಕೆಡೆಟ್ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಭವ್ಯವಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀಮತಿ ಸುಮಂಗಲ ಬಿ. ಪಾಟೀಲ್ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ವಿದ್ಯಾರ್ಥಿಗಳು ಏಕತೆ, ಶಿಸ್ತು ಹಾಗೂ ದೇಶಭಕ್ತಿ ಎಂಬ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಆರ್‌ಡಿಸಿ ಶಿಬಿರದಲ್ಲಿ ಭಾಗವಹಿಸುವುದು ಅತ್ಯಂತ ಗೌರವದ ಸಂಗತಿಯಾಗಿದ್ದು, ಅದು ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ನಿಷ್ಠೆ ಮತ್ತು ತ್ಯಾಗದ ಪ್ರತೀಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಗಣರಾಜ್ಯೋತ್ಸವದ ಅಂಗವಾಗಿ ನಡೆದ ರಾಷ್ಟ್ರಮಟ್ಟದ ಆರ್‌ಡಿಸಿ ಪರೇಡ್ ಕ್ಯಾಂಪಿನಲ್ಲಿ ಸಂಸ್ಥೆಯನ್ನು ಪ್ರತಿನಿಧಿಸಿದ ಹೆಮ್ಮೆಯ ಎನ್‌ಸಿಸಿ ತಂಡದ ಕೆಡೆಟ್ಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ನಮ್ಮ ಮಹಾವಿದ್ಯಾಲಯದ ಎನ್‌ಸಿಸಿ ಕೆಡೆಟ್ಗಳಾದ ಎಸ್‌ಯುಒ ಪೂಜಾ ಬಂಡಿವಾಡ (C.B.) ಹಾಗೂ ಎಸ್‌ಯುಒ ದರ್ಶನ್ ಕುಮಾರ್ ಅವರು ಗಮನಾರ್ಹ ಸಾಧನೆಗೈದು ಸಂಸ್ಥೆಗೆ ಕೀರ್ತಿ ತಂದ ಹಿನ್ನೆಲೆಯಲ್ಲಿ ವಿಶೇಷವಾಗಿ ಅಭಿನಂದಿಸಲ್ಪಟ್ಟರು.
ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಸಿ.ಕೆ. ಪಾಟೀಲ್ ಅವರು ಕೆಡೆಟ್ಗಳಿಗೆ ಸಮರ್ಪಕ ಮಾರ್ಗದರ್ಶನ ನೀಡಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲು ಪ್ರಮುಖ ಪಾತ್ರವಹಿಸಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಸಾಧನೆಗೈದ ಕೆಡೆಟ್ಗಳನ್ನು ಅಭಿನಂದಿಸಿದರು.




