ಅಪರಾಧಜಿಲ್ಲೆ

ಹುಬ್ಬಳ್ಳಿಯಲ್ಲಿ ಕಾರ್ ನಿಯಂತ್ರಣ ತಪ್ಪಿ ಅವಘಡ…

ಹುಬ್ಬಳ್ಳಿ: ವೇಗವಾಗಿ ಕಾರು ಚಲಾಯಿಸಿ ನಿಯಂತ್ರಣ ಮಾಡಲಾಗದೇ ಕಾರು ಚಾಲಕ ರಸ್ತೆ ಪಕ್ಕದ ವಿದ್ಯುತ್ ಕಂಬ, ಏರಿಯಾ ಸೂಚನಾ ಫಲಕಕ್ಕೆ ಗುದ್ದಿರುವ ಘಟನೆ ನಾಗಲಿಂಗ ನಗರದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಕಾರು ಚಾಲಕ ಆನಂದ ನಗರದಿಂದ ಬರುತ್ತಿರುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನೂ ಕಾರ‌ನಲ್ಲಿ ನಾಲ್ಕು ಜನರು ಇದ್ದರು ಎಂಬ ಮಾಹಿತಿ ಇದೆ. ಇನ್ನೂ ಡ್ರೈವರ್ ಕುಡಿದು ಓಡಿಸಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಇನ್ನೂ ಘಟನೆಯಲ್ಲಿ ಒರ್ವನಿಗೆ ಗಂಭೀರವಾಗಿ ಗಾಯವಾಗಿದ್ದು, ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

ಸ್ಥಳಕ್ಕೆ ದಕ್ಷಿಣ ಸಂಚಾರಿ ಟ್ರಾಪಿಕ್ ಪೋಲಿಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
1
+1
0
+1
0

Related Articles

Leave a Reply

Your email address will not be published. Required fields are marked *

Back to top button