
ಮುಂಡಗೋಡ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವ ಕರ್ತವ್ಯನಿರತ ಸರ್ಕಾರಿ ಸಿಬ್ಬಂದಿಗೆ ಕಚೇರಿಗೆ ಹೋಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲದೇ ಜಾತಿ ಹಿಡಿದು ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ಬಸವನಬಿದಿಯ ನಿವಾಸಿ ವೆಂಕಟೇಶ ಶಿರಾಲಿ ಎಂಬಾತನೇ ಜೀವ ಬೆದರಿಕೆ ಹಾಕಿದ್ದು, ಈತ ಕಳೆದ ಡಿಸೆಂಬರ್ 2 ರಂದು ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಡಿ ದರ್ಜೆಯ ನೌಕರರಾಗಿ ಕರ್ತವ್ಯ ನಿರ್ವಹಿಸುವ ನೀಲಗಂಗವ್ವ ಛಲವಾದಿ ಎಂಬಾತರಿಗೆ ಕಚೇರಿಗೆ ಹೋಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲದೇ ಜಾತಿ ಹಿಡಿದು ಅವಾಚ್ಯವಾಗಿ ನಿಂದಿಸಿದ್ದಾನಂತೆ. ಅಲ್ಲದೇ ಜೀವ ಬೆದರಿಕೆ ಹಾಕಿದ್ದಾನೆಂದು ಮುಂಡಗೋಡ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವರದಿ- ವೆಂಕಟೇಶ ದಾಸರ
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
1
+1
+1
+1
+1
+1




