ಹುಬ್ಬಳ್ಳಿ: ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಸರ್ಕಾರದಿಂದ ಬಡ್ತಿ ಸಿಕ್ಕಿದೆ. ಕಮಿಷನರ್ ಹುದ್ದೆಯಿಂದ ಐಜಿಪಿ ದರ್ಜೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಹು-ಧಾ ಪೊಲೀಸ್ ಆಯುಕ್ತರಾಗಿರುವ ಎನ್.ಶಶಿಕುಮಾರ್ ಅವರು, ಬಡ್ತಿ ಬಳಿಕವೂ ಅದೇ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.
2007 ಬ್ಯಾಚಿನ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾದ ಎನ್.ಶಶಿಕುಮಾರ್ ಅವರು 2024ರ ಜುಲೈನಲ್ಲಿ ಹು-ಧಾ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದರು. ಈ ಹಿಂದೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರು, ಮಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳನ್ನು ಎನ್.ಶಿಶಿಕುಮಾರ್ ಅವರು ನಿರ್ವಹಿಸಿದ್ದರು.
ಸದ್ಯ ಹು-ಧಾ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ತಡ ದಕ್ಷ ಮತ್ತು ಕಟ್ಟುನಿಟ್ಟಿನ ಆಡಳಿತದ ಮೂಲಕ ಹು-ಧಾ ಜನತೆಯ ಮನಸ್ಸನ್ನು ಗೆದ್ದಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1