ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಹೇಗಾದರೂ ಕಾಂಗ್ರೆಸ್ ಬಾವುಟ ಹಾರಿಸಲು ಪಕ್ಷ ಸಾಕಷ್ಟು ಶ್ರಮಿಸುತ್ತಿದೆ. ಈ ನಡುವೆ ಟಿಕೆಟ್ ಗಾಗಿ ಭಾರಿ ಲಾಬಿ ನಡೆಯುತ್ತಿದೆ. ಕಾಂಗ್ರೆಸ್ ಮುಖಂಡ ರಮೇಶ ಕೊಪ್ಪದ ಅವರು, ತಾವು ಕೂಡಾ ಟಿಕೆಟ್ ಅಕಾಂಕ್ಷಿ ಎಂದು ಘೋಷಿಸಿದ್ದಾರೆ.
‘ಬಿ ಫಾರಂ ಬಿಡುಗಡೆಯಾಗುವವರೆಗೂ ಪಕ್ಷದ ಅಭ್ಯರ್ಥಿ ಯಾರೆಂಬುದು ಅಂತಿಮವಾಗದು, ನಾನು ಕೂಡಾ ಕುಂದಗೋಳ ವಿಧಾನಸಭಾ ಕ್ಷೇತ್ರದ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ರಮೇಶ ಕೊಪ್ಪದ ಹೇಳಿದ್ದಾರೆ.
ಪಕ್ಷವೊಂದರಲ್ಲಿ ಕಾರ್ಯಕರ್ತನಾಗುವುದೇ ಅತಿ ದೊಡ್ಡ ಸ್ಥಾನ ಎಂದು ಭಾವಿಸಿದ್ದೇನೆ. ಟಿಕೆಟ್ ನೀಡಿದಲ್ಲಿ ಸ್ಪರ್ಧಿಸುತ್ತೇನೆ, ಇಲ್ಲವಾದರೆ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದರು.
ಈ ಬಾರಿ ನಾನು ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ವರಿಷ್ಠರಿಗೂ ನನ್ನ ಮನವಿಯನ್ನು ಸಲ್ಲಿಸಿದ್ದೇನೆ. ಪಕ್ಷದ ವರಿಷ್ಠರು ಸಮೀಕ್ಷೆ ಮಾಡಿ ಟಿಕೆಟ್ ನೀಡುವುದಾಗಿ ತಿಳಿಸಿದ್ದಾರೆ. ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ತಿಳಿಸಿದರು.