
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಆಯೋಜನೆಯ ಗಾಳಿಪಟ ಉತ್ಸವದಲ್ಲಿ ಖರ್ಚಿಗಾಗಿ ಎರಡು ಗುಂಪುಗಳು ಬಡಿದಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಹೌದು, ಹುಬ್ಬಳ್ಳಿಯ ಆಕ್ಸ್‌ಫರ್ಡ್ ಕಾಲೇಜು ಹಿಂದುಗಡೆಯ ಹೊರವಲಯದಲ್ಲಿ ಹಮ್ಮಿಕೊಂಡಿದ್ದ ಗಾಳಿಪಟ ಉತ್ಸವದಲ್ಲಿ ಯುವಕರು ಖುರ್ಚಿಗಾಗಿ ಜಗಳ ಮಾಡಿಕೊಂಡಿದ್ದಾರೆ.
ಇನ್ನೂ ಗಲಾಟೆಯಲ್ಲಿ ಹತ್ತಕ್ಕೂ ಹೆಚ್ಚು ಖುರ್ಚಿ ಮುರಿದಿದ್ದು, ಒಬ್ಬ ಯುವಕನ ತಲೆಗೆ ಗಂಭೀರವಾಗಿ ಗಾಯವಾಗಿದೆ. ಬಡಿದಾಡಿಕೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಕೇಶ್ವಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1