ಹುಬ್ಬಳ್ಳಿ: ಇದು “ದಿನವಾಣಿ Impact”, ಸುದ್ದಿ ಪ್ರಸಾರ ಮಾಡಿದ ಬಳಿಕ ಎಚ್ಚೆತುಕೊಂಡ ಅಧಿಕಾರಿಗಳು.
ಹೌದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ರಾತ್ರಿ ವೈದ್ಯಕೀಯ ವಿದ್ಯಾರ್ಥಿಗಳು ಆಸ್ಪತ್ರೆ ಎಂಬುದನ್ನು ಮರೆತು ಅಬ್ಬರದ ಡಿಜೆ ಹಚ್ಚಿ, ಭರ್ಜರಿ ಸ್ಟೆಪ್ ಹಾಕಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬಳಿಕ ಸಾರ್ವಜನಿಕರಿಂದ ವಿದ್ಯಾರ್ಥಿಗಳ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ನಿಮ್ಮ ದಿನವಾಣಿ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ ವೈದ್ಯಕೀಯ ವಿದ್ಯಾರ್ಥಿಗಳು ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟಿಸಲಾಗಿತ್ತು.
ಇದೀಗ ಕಿಮ್ಸ್ ಆಡಳಿತ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ವಿದ್ಯಾರ್ಥಿಗಳ ನಡೆ ಕುರಿತು ಸಮಿತಿ ರಚಿಸಿ ವರದಿ ತರಿಸಿಕೊಂಡು ತಪ್ಪಿತಸ್ಥರಿಗೆ ಶಿಕ್ಷೆ ಕೊಡುವ ಭರವಸೆ ನೀಡಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
1
+1
+1
+1
+1