ಹುಬ್ಬಳ್ಳಿ: ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದಕ್ಕೆ ಮತ್ತೊಮ್ಮೆ ನೆತ್ತರು ಹರಿದಿದೆ.
ಅಂಜಲಿ, ಕೊಲೆಯಾದ ಯುವತಿ
ನಗರದ ವೀರಾಪುರ ಓಣಿಯ ನಿವಾಸಿ ಅಂಜಲಿ ಅಂಬಿಗೇರ (20) ಎಂಬಾಕೆಯೇ ಸಾವನ್ನಪ್ಪಿದ ಯುವತಿಯಾಗಿದ್ದು, ಈಕೆಗೆ ಅದೇ ಓರಿಯಾದ ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಚಾಕುವಿನಿಂದ ಚುಚ್ಚಿ ಕೊಲೆಮಾಡಿದ್ದಾನೆಂದು ತಿಳಿದುಬಂದಿದೆ.
ವಿಶ್ವ ಎಂಬ ಹುಚ್ಚು ಪ್ರೇಮಿ ಕಳೆದ ಹಲವಾರು ದಿನಗಳಿಂದ ಅಂಜಲಿಗೆ ಪ್ರೀತಿಸು ಎಂದು ಪೀಡಿಸುತ್ತಿದ್ದನಂತೆ, ಆದರೆ ಅಂಜಲಿ ಪ್ರೀತಿ ನಿರಾಕರಿಸಿದಕ್ಕೆ ಇಂದು ಬೆಳಂಬೆಳ್ಳಗ್ಗೆ ಗುಡಿಓಣಿಯಲ್ಲಿನ ಅಂಜಲಿ ನಿವಾಸಕ್ಕೆ ತೆರಳಿ ಮನೆಯ ಕದ್ದ ಬಡಿದು ಏಕಾಏಕಿ ಅಂಜಲಿ ಹೊಟ್ಟೆಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಸದ್ಯ ವಿಷಯ ತಿಳಿದು ಸ್ಥಳಕ್ಕೆ ಬೆಂಡಿಗೇರಿ ಪೋಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
1
+1
+1
+1
+1
2
+1
+1