ಹುಬ್ಬಳ್ಳಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿ ( Accreditation Committee) ಸದಸ್ಯರಾಗಿ ಇಲ್ಲಿನ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮೂಲತಃ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕು ಕಡ್ಲೆ ಗ್ರಾಮದವರಾದ ಗಂಗೊಳ್ಳಿ ಅವರು, ಕಳೆದ ಸುಮಾರು 35 ವರ್ಷಗಳಿಂದ ಪತ್ರಿಕಾ ರಂಗದಲ್ಲಿದ್ದಾರೆ.ಸಂಯುಕ್ತ ಕರ್ನಾಟಕ, ವಿಶಾಲ ಕರ್ನಾಟಕ,ಕನ್ನಡಮ್ಮ ಪತ್ರಿಕೆಗಳ ವರದಿಗಾರ,ಉಪಸಂಪಾದಕರಾಗಿ ಸೇವೆ ಸಲ್ಲಿಸಿ 1999 ರಲ್ಲಿ ಸಂಜೆ ದರ್ಪಣ ದಿನಪತ್ರಿಕೆ ಪ್ರಾರಂಭಿಸಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ , ಎರಡು ಅವಧಿಗೆ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆಗೈದಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1