ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗ್ಯಾಂಗ್ ವಾರ್…
ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕಾಲೇಜು ಒಂದರ ಎರಡು ಗುಂಪಿನ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಘಟನೆ ವೇಳೆ ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳಿಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳ ವಿಡಿಯೋ…👇
ಇಲ್ಲಿನ ವಿದ್ಯಾನಗರದ ಕೆ.ಎಲ್.ಇ ಕ್ಯಾಂಪಸ್ ನಲ್ಲಿನ ಮುನವಳ್ಳಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳೇ ಗುರುವಾರ ಮಧ್ಯಾಹ್ನ ಪರಸ್ಪರ ಹಾಕಿ ಸ್ಟೀಕ್ ಮೂಲಕ ಹೊಡೆದಾಡಿಕೊಂಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ನಿನ್ನೆ ಕಾಲೇಜಿನ ವಿದ್ಯಾರ್ಥಿಯೊಬ್ಬನ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿ ಕ್ಷುಲ್ಲಕ ಕಾರಣಕ್ಕೆ ಹೊರಗಿನ ಜನರನ್ನು ಕರೆಸಿ ಹೊಡೆಸಿದ್ದಾನಂತೆ. ಇದಕ್ಕೆ ಪ್ರತಿಯಾಗಿ ಹೊಡೆತ ತಿಂದ ವಿದ್ಯಾರ್ಥಿಯು ತನ್ನ ಜನರನ್ನು ಕರೆಸಿಕೊಂಡು ತಂಟೆ ತೆಗೆದುಕೊಂಡಿದ್ದಾನೆ. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ಸಿಕ್ಕ ಹಾಕಿ ಸ್ಟಿಕ್ ಮೂಲಕ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ತಲೆ ಒಡೆದಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.