Top Newsಅಪರಾಧಜಿಲ್ಲೆರಾಜ್ಯ

ಹುಬ್ಬಳ್ಳಿಯ ಕೂಗಳತೆಯಲ್ಲಿಯೇ ಹೈಟೆಕ್ “ವೇಶ್ಯಾವಾಟಿಕೆ”

ಹುಬ್ಬಳ್ಳಿ: ಹುಬ್ಬಳ್ಳಿಯ ಕೂಗಳತೆಯಲ್ಲಿಯೇ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿರುವುದು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಎಸ್‌ಜಿಟಾವರ್ಸ್, ಅಮೃತ ಡಿಲಕ್ಸ್ ಹೋಟೆಲ್‌ನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಲಾಡ್ಜ್ ಮಾಲೀಕ ವೆಂಕಟೇಶ ನಾಯ್ಕ, ಮ್ಯಾನೇಜರ್ ವಿರೇಶ ಮುರುಡೇಶ್ವರ, ಕೆ.ಎಂ.ಪ್ರದೀಪ್ ಗೌಡ, ಮಂಜುನಾಥ್ ಗೌಡ ಬಂಧಿತ ಆರೋಪಿಗಳು.

ಹುಬ್ಬಳ್ಳಿ ತಾಲೂಕಿನ ವರೂರ ಗ್ರಾಮದಲ್ಲಿ ಎಸ್.ಜಿ.ಟವರ್ಸ್ ಹಾಗೂ ಅಮೃತ ಕಂಫರ್ಟ್ ಹೋಟೆಲ್ ಮೇಲೆ ದಾಳಿ ಮಾಡಿದ ಗ್ರಾಮೀಣ ಪೊಲೀಸರ ತಂಡ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ.

ಹೊರ ರಾಜ್ಯದಿಂದ ಅಮಾಯಕ ಯುವತಿಯರಿಗೆ ಉದ್ಯೋಗ ಕೊಡಿಸುವುದಾಗಿ ಕರೆತಂದು ಈ ದಂಧೆ ನಡೆಸುತ್ತಿದ್ದರು. ಆರೋಪಿಗಳು ಆನ್‌ಲೈನ್ ಮೂಲಕ ವ್ಯವಹಾರ ಮಾಡುವಂತೆ. ಸದ್ಯ ಈಗ ಈ ನೀಚರು ಅರೆಸ್ಟ್ ಆಗಿದ್ದು, ಅಮಾಯಕ ಯುವತಿಯರು ಸೇಫ್ ಆಗಿದ್ದಾರೆ.

ಯುವತಿಯರನ್ನು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಕ್ರಿಮಿಗಳನ್ನು ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ರಮೇಶ ಗೋಕಾಕ್ ಜೈಲಿಗೆ ಅಟ್ಟಿದ್ದಾರೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button