Top NewsUncategorizedಅಪರಾಧಜಿಲ್ಲೆರಾಜ್ಯ
Trending

ಹುಬ್ಬಳ್ಳಿಯ ಡಾಲರ್ಸ್ ಕಾಲೋನಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ

ಹುಬ್ಬಳ್ಳಿ: ನಗರದ ಅಪಾರ್ಟ್ಮೆಂಟ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ, ಇಬ್ಬರು ಯುವತಿಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.

ಗೋಕುಲರಸ್ತೆಯ ಪೊಲೀಸ್ ಠಾಣೆ ವ್ಯಾಪ್ತಿಯ ಡಾಲರ್ಸ್ ಕಾಲೋನಿಯ ನಿಕೇತನ ಅಪಾರ್ಟ್ಮೆಂಟ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ, ಇಬ್ಬರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.

ಇನ್ನೂ ಹುಬ್ಬಳ್ಳಿ ನಗರದ ಹಾಗೂ ತುಮಕೂರು ಮೂಲಕ ಅಮಾಯಕ ಯುವತಿಯರನ್ನು ಕೆಲಸ ಕೊಡಿಸುವುದಾಗಿ ನಂಬಿಸಿ, ತದನಂತರ ಹೆಚ್ಚು ಹಣದ ಆಮಿಷ ಒಡ್ಡಿ ವೇಶ್ಯಾವಾಟಿಕೆ ದಂಧೆಯಲ್ಲಿ ದೂಡಲಾಗಿತ್ತು ಎಂದು ತಿಳಿದುಬಂದಿದೆ. ಗಿರಾಕಿಗಳಿಗೆ ಯುವತಿಯರ ಫೋಟೋಗಳನ್ನು ಕಳುಹಿಸಿ, ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ.

ಘಟನೆಗೆ ಸಂಬಂಧಿಸಿದಂತೆ ಗೋಕುಲರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button