ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ political ಪವರ್ ಹೌಸ್ ಗೆ ಸಾಕ್ಷಿಯಾಗ್ತಿದೆ. ಹೌದು, ಇಂದು ಹುಬ್ಬಳ್ಳಿಯಲ್ಲಿ ರಾಜಕೀಯ ನಾಯಕರ ದಂಡು..!! ಬೀಡು ಬಿಟ್ಟಿದೆ.
ಇಂದು ಬೆಳಿಗ್ಗೆ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾಲಿಕೆ ಸದಸ್ಯ ನಿರಂಜನ ಹಿರಮೇಠ ಮನೆಗೆ ಭೇಟಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್ ಅಶೋಕ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಬಳಿಕ 10.30 ಕ್ಕೆ ಬಿಜೆಪಿ ಕಚೇರಿಯಲ್ಲಿ ಆರ್ ಅಶೋಕ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಮತ್ತೊಂದು ಕಡೆ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್ ಬೆನ್ನಲ್ಲೆ ಅಲರ್ಟ್ ಆದ ಜೆಡಿಎಸ್. ಹುಬ್ಬಳ್ಳಿಯಲ್ಲಿ ಜೆಡಿಎಸ್ ನಾಯಕರಿಂದ ಕೋರ್ ಕಮೀಟಿ ಸಭೆ ನಡೆಸಲಿದೆ. ಈ ಕೋರ್ ಕಮೀಟಿ ಸಭೆಯಲ್ಲಿ ಎಚ್ ಡಿ ದೇವೆಗೌಡ, ಕುಮಾರಸ್ವಾಮಿ, ಜಿಟಿ ದೇವೆಗೌಡ ಸೇರಿದಂತೆ 14 ಜಿಲ್ಲೆಯ ಜೆಡಿಎಸ್ ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಇದು ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವವನ್ನು ಪಡೆದುಕೊಂಡಿದೆ.
ಈ ಸಭೆಗೂ ಮುನ್ನ ನಗರದ ಖಾಸಗಿ ಹೊಟೆಲ್ ನಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಮಾಜಿ ಸಿಎಮ್ ಕುಮಾರಸ್ವಾಮಿ, ಮಾಜಿ ಸಚಿವ ಜಿಟಿ ದೇವೆಗೌಡ ಅವರು ಮಾಡಲಿದ್ದಾರೆ.
ಪ್ರಜ್ವಲ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಇನ್ನೊಂದು ಕಡೆ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಖಂಡಿಸಿ ಕೈ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ರಾಣಿ ಚೆನ್ನಮ್ಮ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೂ ಪ್ರತಿಭಟನೆ ನಡೆಸಿ, ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಹುಬ್ಬಳ್ಳಿ ಧಾರವಾಡ ಪೂರ್ವ ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಇನ್ನಿತರ ನಾಯಕರು ಭಾಗವಹಿಸಲಿದ್ದಾರೆ.
ಒಟ್ಟಿನಲ್ಲಿ ಇಂದು ಹುಬ್ಬಳ್ಳಿ ರಾಜಕೀಯ ನಾಯಕರ ಸಾಲು ಸಾಲು ಸಭೆ, ಸಮಾರಂಭ, ಪ್ರತಿಭಟನೆಗಳಿಗೆ ಸಾಕ್ಷಿ ಆಗಲಿದೆ.