
ಧಾರವಾಡ/ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಒತ್ತಾಯಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, 7 ಲಕ್ಷದ 80 ಸಾವಿರಕ್ಕೂ ಹೆಚ್ಚು ದೂರುಗಳು ಬರುವವರೆಗೂ ನೀವು ಬಾಳೆಹಣ್ಣು ತಿನ್ನುತ್ತಾ ಇದ್ರಾ? ಎಷ್ಟು ಕ್ರಮ ಕೈಗೊಂಡಿದ್ದೀರಿ? ಎಷ್ಟು ಜನರನ್ನು ಬಂಧಿಸಿದ್ದೀರಿ ಎಂದು ಪ್ರಶ್ನಿಸಿದರು.
ಮೀಟರ್ ಬಡ್ಡಿ ಹಾವಳಿಯಿಂದ ಬಡವರು ಮನೆ, ಹಳ್ಳಿ ಖಾಲಿ ಮಾಡಿ ತೆರಳುತ್ತಿದ್ದಾರೆ. ಫೈನಾನ್ಸ್‌ಗಳ ಶೋಷಣೆ ವಿಚಾರದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1